ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ 2022: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ 2022 ಅನ್ನು ಸೋಮವಾರ, ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸಚಿವರು ಟ್ವಿಟ್ಟರ್ ನಲ್ಲಿ “ದ್ವಿತೀಯ ಪಿಯುಸಿ ಪೂರಕ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುವುದು.
ಫಲಿತಾಂಶವು 11 ಗಂಟೆಯ ನಂತರ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ.” ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ಈ ಹಿಂದೆ ಅಧಿಕೃತ ವೆಬ್‌ಸೈಟ್- karresults.nic.in ನಲ್ಲಿ ಸಕ್ರಿಯಗೊಳಿಸಲಾಗಿತ್ತು, ಆದರೆ ನಂತರ ತೆಗೆದುಹಾಕಲಾಗಿದೆ. ಪಿಯುಸಿ ಪೂರಕ ಅಂಕಪಟ್ಟಿ ಡೌನ್‌ಲೋಡ್ ಮಾಡಲು ಅಭ್ಯರ್ಥಿಗಳು ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆಯನ್ನು ಬಳಸಬೇಕಾಗುತ್ತದೆ.
ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಜೂನ್ 18 ರಿಂದ ನಡೆಸಲಾಗಿತ್ತು. ಪರೀಕ್ಷೆಯಲ್ಲಿ ಒಟ್ಟು 61.88 ಶೇಕಡಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಪೂರಕ ಪರೀಕ್ಷೆಯನ್ನು ಆಗಸ್ಟ್ 12 ರಿಂದ ಆಗಸ್ಟ್ 25, 2022 ರವರೆಗೆ ಎರಡು ಅವಧಿಗಳಲ್ಲಿ ನಡೆಸಲಾಯಿತು. ಬೆಳಗಿನ ಅಧಿವೇಶನವು 10:15 ರಿಂದ 1:30 ರ ನಡುವೆ ಮತ್ತು ಮಧ್ಯಾಹ್ನದ ಅಧಿವೇಶನವು 2:15 ರಿಂದ 5:30 ರ ನಡುವೆ ನಡೆಸಲಾಯಿತು.
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://karresults.nic.in/?utm_source=DH-MoreFromPub&utm_medium=DH-app&utm_campaign=DH ಗೆ ಭೇಟಿ ನೀಡಿ
ಸ್ಟೆಪ್ 2 : ಸ್ಕ್ರೀನ್ ಮೇಲೆ ಫಲಿತಾಂಶ ಲಿಂಕ್ ಕಾಣಿಸಿಕೊಳ್ಳುತ್ತದೆ. ಆ ಲಿಂಕ್ ಮೇಲೆ
ಸ್ಟೆಪ್ 3 : ವಿದ್ಯಾರ್ಥಿಗಳು ನಿಮ್ಮ ರಿಜಿಸ್ಟರ್ ಸಂಖ್ಯಹೆ ಮತ್ತು ಅಲ್ಲಿ ಕೇಳಲಾಗಿರುವ ಇತರೆ ಮಾಹಿತಿಯನ್ನು ತುಂಬಿ ಲಾಗಿನ್ ಮಾಡಿ
ಸ್ಟೆಪ್ 4 : ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.
ಫಲಿತಾಂಶ ವೀಕ್ಷಿಸಿದ ಬಳಿಕ ವಿದ್ಯಾರ್ಥಿಗಳಿಗೆ ಏನಾದರೂ ಪ್ರಶ್ನೆಗಳಿದ್ದಲ್ಲಿ ಮಂಡಳಿಯನ್ನು ಸಂಪರ್ಕಿಸಬಹುದು.
