ಕಾಸರಗೋಡು: ಪೊಲೀಸರ ಮೇಲೆ ಹಲ್ಲೆಗೆ ಸಂಬಂಧಪಟ್ಟಂತೆ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.ಯೂತ್ ಲೀಗ್ ಜಿಲ್ಲಾ ಕಾರ್ಯದರ್ಶಿ, ಉಪ್ಪಳ ಹಿದಾಯತ್ ಬಜಾರ್ ನ ಗೋಲ್ಡನ್ ಅಬ್ದುಲ್ ರಹಮಾನ್ (34) ಬಂಧಿತ.ಮಂಜೇಶ್ವರ ಪೊಲೀಸರು ಸೋಮವಾರ ಸಂಜೆ ಅಬ್ದುಲ್ ರಹಮಾನ್ ಮನೆಗೆ ತಲಪಿ ವಶಕ್ಕೆ ತೆಗೆದುಕೊಂಡಿದ್ದು, ಬಳಿಕ ಬಂಧಿಸಿದ್ದಾರೆ.ಭಾನುವಾರ ರಾತ್ರಿ ಉಪ್ಪಳ ಹಿದಾಯತ್ ನಗರದಲ್ಲಿ ಘಟನೆ ನಡೆದಿದ್ದು, ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ಜನರು ಗುಂಪುಗೂಡಿರುವುದನ್ನು ಕಂಡು ಸ್ಥಳಕ್ಕೆ ತೆರಳಿದ್ದ ಪೊಲೀಸರ ಗುಂಪೊಂದು ಹಲ್ಲೆ ನಡೆಸಿತ್ತು. ಹಲ್ಲೆಯಿಂದ ಸಬ್ ಇನ್ಸ್ ಪೆಕ್ಟರ್ ಪಿ.ಅನೂಪ್ ಸೇರಿದಂತೆ ಇಬ್ಬರು ಪೊಲೀಸರು ಗಾಯಗೊಂಡಿದ್ದರು. ಹಲ್ಲೆ ಗೈದ ತಂಡದಲ್ಲಿ ಅಬ್ದುಲ್ ರಹಮಾನ್ ಕೂಡಾ ಇದ್ದರು ಎಂದು ಆರೋಪಿಸಿ ಪೊಲೀಸರು ಬಂಧಿಸಿದ್ದಾರೆ.ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ರಶೀದ್, ಅಫ್ಜಲ್ ಸೇರಿದಂತೆ ಇಬ್ಬರನ್ನು ಸೋಮವಾರ ಬಂಧಿಸಲಾಗಿತ್ತು. ಇಬ್ಬರು ತಲೆ ಮರೆಸಿ ಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
©2021 Tulunada Surya | Developed by CuriousLabs