Tuesday, September 17, 2024
spot_img
More

    Latest Posts

    ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕ ಹೃದಯಾಘಾತದಿಂದ ನಿಧನ

    ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ.

    ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ ಅಚ್ಯುತ ನಾಯಕ್ ( 45) ಅವರು ಹೃದಯ ಘಾತದಿಂದ ನಿಧನರಾಗಿದ್ದಾರೆ.ಪ್ರಸ್ತುತ ಕಟೀಲು ಮೇಳವು ಕಾಲಮಿತಿ ಯಕ್ಷಗಾನವಾಗಿದ್ದು, ರಾತ್ರಿ ಗಂಟೆಗೆ 1.ರ ಸುಮಾರಿಗೆ ಯಕ್ಷಗಾನ ಮುಗಿದು ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಏಕಾಏಕಿ ಅಸ್ವಸ್ಥತೆಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿ ದಾಗ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಕಳೆದ ಹಲವು ವರ್ಷಗಳಿಂದ ಕಟೀಲು ಮೇಳದ ಚೌಕಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ಅವರು, ಈ ಹಿಂದೆ ಸರಪಾಡಿ ಸೇರಿದಂತೆ ಹಲವೆಡೆ ಸಣ್ಣ ಹೋಟೆಲ್ ನಡೆಸುತ್ತಿದ್ದರು, ಜೊತೆಗೆ ಅಡುಗೆ ಕೆಲಸಕ್ಕೂ ಹೋಗುತ್ತಿದ್ದರು ಎನ್ನಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss