ಕುಂದಾಪುರ: ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ,ಉದ್ಯಮಿ ಕಟ್ಟೆ ಭೋಜಣ್ಣ ಅವರು ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಟ್ಟೆ ಭೋಜಣ್ಣ (80) ಇಂದು ತಮ್ಮ ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡಿದ್ದಾರೆ.
ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಇವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋಟ್ಯಧಿಪತಿಯಾಗಿರುವ ಕಟ್ಟೆ ಭೋಜಣ್ಣ ಶೆಟ್ಟಿ, ಬೆಂಗಳೂರಿನಲ್ಲಿ ಹಲವಾರು ಹೋಟೆಲ್ ಗಳ ಮಾಲಕರು.ಅವರ ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲವಾದರೂ ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಇರಬಹುದು ಎನ್ನುವ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.ಘಟನಾಸ್ಥಳಕ್ಕೆ ಕುಂದಾಪುರ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
