ತಿರುವನಂತಪುರಂ, ಮೇ 06: ಕೇರಳದಲ್ಲಿ ಕೋವಿಡ್ 2ನೇ ಅಲೆ ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಹಿನ್ನಲೆಯಲ್ಲಿ ,ಇದಕ್ಕೆ ತಡೆ ಒಡ್ಡುವ ನಿಟ್ಟಿನಲ್ಲಿ ಅಲ್ಲಿನ ಸರಕಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಮೇ 8 ರಿಂದ 16ರ ತನಕ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ ಎಂದು ಕೇರಳ ಮುಖ್ಯ ಮಂತ್ರಿ ಕಚೇರಿ ಗುರುವಾರ ಘೋಷಣೆ ಮಾಡಿದೆ

ಕೇರಳದಲ್ಲಿ ಬುಧವಾರ 41,953 ಹೊಸ ಕೋವಿ.ಡ್ ಪ್ರಕರಣಗಳು ದಾಖಲಾಗಿವೆ. ಇದು ಈ ವರೆಗೆ ರಾಜ್ಯದಲ್ಲಿ ಒಂದು ದಿನದ ಅತ್ಯಧಿಕ ಸಂಖ್ಯೆಯಾಗಿದೆ ರಾಜ್ಯದಲ್ಲಿನ ಒಟ್ಟು ಪ್ರಕರಣಗಳ ಸಂಖ್ಯೆ 17,43,933ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,75,657ಕ್ಕೆ ಏರಿಕೆಯಾಗಿದೆ. 5,566 ಜನರು ಇದುವರೆಗೂ ರಾಜ್ಯದಲ್ಲಿ ಮೃತಪಟ್ಟಿದ್ದಾರೆ.
ಮುಖ್ಯಮಂತ್ರಿಗಳ ಕಚೇರಿ ಲಾಕ್ ಡೌನ್ ಕುರಿತು ಮಾಹಿತಿ ನೀಡಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಸೂಚನೆಯಂತೆ ಮೇ 8ರಿಂದ 16ರ ತನಕ ಸಂಪೂರ್ಣ ಲಾಕ್ ಡೌನ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿದೆ.
ಕೇರಳದಲ್ಲಿ ಬುಧವಾರ 41,953 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿತ್ತು. ಒಂದೇ ದಿನದಲ್ಲಿ ದಾಖಲಾದ ಅತಿ ಹೆಚ್ಚು ಹೊಸ ಪ್ರಕರಣವಿದಾಗಿತ್ತು. ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಅಧ್ಯಯನ ಮಾಡಿದ ಬಳಿಕ ಲಾಕ್ ಡೌನ್ ಜಾರಿಗೊಳಿಸುವ ತೀರ್ಮಾನವನ್ನು ಮಾಡಲಾಗಿದೆ.
ಕೋವಿಡ್ ಪರಿಸ್ಥಿತಿಗೆ ಅನುಗುಣವಾಗಿ ವಾರ್ಡ್ ಮಟ್ಟದಲ್ಲಿ ಆರೋಗ್ಯ ಸೇವೆಗಳನ್ನು ನೀಡಲು, ಆಕ್ಸಿಜನ್ ವ್ಯವಸ್ಥೆ ಮಾಡಲು ವಾರ್ಡ್ ಮಟ್ಟದ ಸಮಿತಿಗಳನ್ನು ಸಕ್ರಿಯಗೊಳಿಸಬೇಕು ಎಂದು ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ