Friday, June 14, 2024
spot_img
More

  Latest Posts

  ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ: ಆರೋಪಿ ಕಿರಣ್ 15 ದಿನ ಪೊಲೀಸ್ ಕಸ್ಟಡಿಗೆ

  ಬೆಂಗಳೂರು: ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಪ್ರತಿಮಾ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವಂತ ಕಿರಣ್ ಗೆ ನ್ಯಾಯಾಲಯವು 15 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

  ನಿನ್ನೆ ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಚಾಮರಾಜನಗರದಲ್ಲಿ ಮಾಜಿ ಕಾರು ಚಾಲಕ ಕಿರಣ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

  ಆತನನ್ನು ಇಂದು ಬೆಂಗಳೂರಿನ 2ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು.

  ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದಂತ ನ್ಯಾಯಾಧೀಶರ ಮುಂದೆ ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ನಡೆಸೋದಕ್ಕೆ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಕೋರಿದ್ದರು. ಈ ಹಿನ್ನಲೆಯಲ್ಲಿ ಆರೋಪಿ ಕಿರಣ್ 15 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

  ಅಂದಹಾಗೇ ನಿನ್ನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೊಡ್ಡಕಲ್ಲಸಂದ್ರದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡಿಡಿಯಾಗಿದ್ದಂತ ಪ್ರತಿಮಾ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದಂತ ಪೊಲೀಸರು ಆರೋಪಿ ಕಿರಣ್ ಬಂಧಿಸಿದ್ದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss