ಬೆಂಗಳೂರು : ವಿಧಾನಸೌಧಕ್ಕೆ ಚಾಕು ಹಿಡಿದುಕೊಂಡು ಬಂದಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ವರದಿಯಾಗಿದೆ.
ಮಾ.26 ರಂದು ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ಚಾಕು ಹಿಡಿದು ವಿಧಾನಸೌಧ ಪ್ರವೇಶಿಸಲು ಮುಂದಾಗಿದ್ದಾನೆ.
ಈ ವೇಳೆ ಮೆಟಲ್ ಡಿಟೆಕ್ಟರ್ ತಪಾಸಣೆ ವೇಳೆ ಈತ ಚಾಕು ಹಿಡಿದಿಕೊಂಡು ಬಂದಿರುವ ವಿಚಾರ ಗೊತ್ತಾಗಿದೆ. ಕೂಡಲೇ ಭದ್ರತಾ ಸಿಬ್ಬಂದಿಗಳು ಆತನನ್ನು ಪೊಲೀಸ್ ವಶಕ್ಕೆ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಹಿನ್ನೆಲೆ, ಇನ್ನಿತರ ಮಾಹಿತಿ ಪಡೆಯಲು ವಿಚಾರಣೆ ನಡೆಸುತ್ತಿದ್ದಾರೆ.
