ಕೊಪ್ಪಳ(ಕುಕನೂರು): ಕೋಳಿ ಫಾರಂ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ ಘಟನೆ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಕೋಳಿ ಫಾರಂ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಸಂಬಂಧಿಯ ಹೆಸರಲ್ಲಿದ್ದು, ಹಾಗಾಗಿ ರನ್ಯಾ ರಾವ್ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಹಲವು ಬಾರಿ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಬಂದು ಹೋಗಿದ್ದರು.
ಬುಧವಾರ ಬೆಳಿಗ್ಗೆಯಿಂದ ಕೋಳಿ ಫಾರಂ ಗೇಟ್ ಬಂದ್ ಮಾಡಿ, ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳು ದೆಹಲಿಯಿಂದ ಬಂದು, ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಇದ್ದು, ಭದ್ರತೆಗಾಗಿ ಬಿ.ಎಸ್.ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬಂದಿದ್ದಾರೆ. ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಸ್ಥಳೀಯ ಪೊಲೀಸರನ್ನೂ ಬದಿಗಿಟ್ಟು ಕಾರ್ಯಾಚರಣೆ ಮಾಡಿರುವುದು ಗಮನಾರ್ಹ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ಲಭ್ಯ ವಾಗಬೇಕಾಗಿದೆ.
Trending
- ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ
- ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ – ಯಕ್ಷಾಂಗಣ ಪ್ರಶಸ್ತಿ ಪ್ರದಾನ
- “ಎಂಸಿಎಫ್ ಹೆಸರು ಉಳಿಸಿ” ಅಭಿಯಾನ – ಐತಿಹಾಸಿಕ ಮೊದಲ ಸಭೆ ಮಂಗಳೂರಿನಲ್ಲಿ ಯಶಸ್ವಿ
- ಕಾಪು : ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳಾಂತರಿಸುವ ವೇಳೆ ಮೃತ್ಯು
- ತೀಯಾ ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಅಗತ್ಯ – ಸದಾಶಿವ ಉಳ್ಳಾಲ್
- ಡಿ.ಕೆ. ಟ್ರಾನ್ಸ್ಪೋರ್ಟ್ & ಲಾಜಿಸ್ಟಿಕ್ ಸರ್ವೀಸಸ್ – ಹೊಸ ಕಚೇರಿ ಉದ್ಘಾಟನೆ
- ಪಿಲಿಪಂಜ” ತುಳು ಚಲನಚಿತ್ರದ ಎರಡನೇ ಹಾಡಾದ ಫ್ರೆಂಡ್ಷಿಪ್ ಸಾಂಗ್, ಭಾನುವಾರ ಮಂಗಳೂರಿನ ಭಾರತ್ ಮಾಲ್ನಲ್ಲಿ ಅದ್ಧೂರಿಯಾಗಿ ಬಿಡುಗಡೆ
- ಉಡುಪಿ: ಪ್ರಧಾನಿ ನರೇಂದ್ರ ಮೋದಿ ಭವ್ಯ ರೋಡ್ ಶೋ – ಜನಸಾಗರದ ನಡುವೆ ಭಾವಪೂರ್ಣ ಸ್ವಾಗತ

