ಕೊಪ್ಪಳ(ಕುಕನೂರು): ಕೋಳಿ ಫಾರಂ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ ಘಟನೆ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಕೋಳಿ ಫಾರಂ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಸಂಬಂಧಿಯ ಹೆಸರಲ್ಲಿದ್ದು, ಹಾಗಾಗಿ ರನ್ಯಾ ರಾವ್ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಹಲವು ಬಾರಿ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಬಂದು ಹೋಗಿದ್ದರು.
ಬುಧವಾರ ಬೆಳಿಗ್ಗೆಯಿಂದ ಕೋಳಿ ಫಾರಂ ಗೇಟ್ ಬಂದ್ ಮಾಡಿ, ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳು ದೆಹಲಿಯಿಂದ ಬಂದು, ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಇದ್ದು, ಭದ್ರತೆಗಾಗಿ ಬಿ.ಎಸ್.ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬಂದಿದ್ದಾರೆ. ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಸ್ಥಳೀಯ ಪೊಲೀಸರನ್ನೂ ಬದಿಗಿಟ್ಟು ಕಾರ್ಯಾಚರಣೆ ಮಾಡಿರುವುದು ಗಮನಾರ್ಹ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ಲಭ್ಯ ವಾಗಬೇಕಾಗಿದೆ.
Trending
- “ಅವಧಿ ಮೀರಿದ ಆಹಾರ ಮಾರಾಟಕ್ಕೆ ಕಡಿವಾಣ ಹಾಕಿ: ಆಹಾರ ಸುರಕ್ಷತಾ ಅಧಿಕಾರಿಗಳ ಕಾರ್ಯಕ್ಕೆ ಯೋಗಿಶ್ ಶೆಟ್ಟಿ ಜಪ್ಪು ಮೆಚ್ಚುಗೆ”
- ಪಿಲಿನಲಿಕೆ-11 ಹುಲಿವೇಷ ಸ್ಪರ್ಧೆಗೆ ಸಜ್ಜಾದ ಮಂಗಳೂರು ವಿಜೇತ ತಂಡಕ್ಕೆ ₹10 ಲಕ್ಷ ನಗದು ಬಹುಮಾನ – 9 ಪ್ರತಿಷ್ಠಿತ ತಂಡಗಳ ನಡುವೆ ಪೈಪೋಟಿ ಅಕ್ಟೋಬರ್ 20ರಂದು ಕರಾವಳಿ ಉತ್ಸವ ಮೈದಾನದಲ್ಲಿ ಅದ್ಧೂರಿ ಆಯೋಜನೆ | ದಿನೇಶ್ ಕಾರ್ತಿಕ್, ಗ್ರೇಟ್ ಕಾಲಿ ಸೇರಿದಂತೆ ಖ್ಯಾತ ತಾರೆಯರ ಆಗಮನದ ನಿರೀಕ್ಷೆ
- ಭವಾನಿ ಫೌಂಡೇಶನ್ ಟ್ರಸ್ಟ್ನ ನೂತನ ಅಧ್ಯಕ್ಷರಾಗಿ ಧರ್ಮಪಾಲ ಯು. ದೇವಾಡಿಗ ಆಯ್ಕೆ ತುಳು ಭಾಷೆ, ಸಂಸ್ಕೃತಿ ಹಾಗೂ ಸಮಾಜಸೇವೆಯಲ್ಲಿ ಗಣನೀಯ ಕೊಡುಗೆ
- ಉಪ್ಪೂರು ಗ್ರಾಮದ ಅಭಿವೃದ್ಧಿಗೆ 8 ಮಹತ್ವದ ಬೇಡಿಕೆ: ಫ್ರ್ಯಾಂಕಿ ಡಿಸೋಜ ಮನವಿಗೆ ಶಾಸಕ ಯಶ್ಪಾಲ್ ಸುವರ್ಣ ಸಕಾರಾತ್ಮಕ ಸ್ಪಂದನೆ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಮನವಿ
- ಎಂಆರ್ಪಿಎಲ್ ಸ್ಫೋಟ ದುರಂತ: ಮತ್ತೋರ್ವ ಗಾಯಾಳು ರಾಜೇಶ್ ಡಿಸಿಲ್ವ ನಿಧನ ಯೋಗಿಶ್ ಶೆಟ್ಟಿ ಜಪ್ಪು ತೀವ್ರ ಸಂತಾಪ
- ತುಳು ಭಾಷಾ ಕಲಿಕಾ ಪುಸ್ತಕ ಬಿಡುಗಡೆ
- ಉಡುಪಿ ಜಿಲ್ಲೆಯಲ್ಲಿ ಉದ್ಯಮಿಗಳಿಗೆ ಬೆದರಿಕೆ ಕರೆ! ಹೆಮಂತ್ ಪೂಜಾರಿ ಹೆಸರಿನಲ್ಲಿ ₹5 ಕೋಟಿ ಸುಲಿಗೆಗೆ ಬೇಡಿಕೆ
- ಎಲ್ಲರ ಪ್ರೀತಿ, ಆಶೀರ್ವಾದದಿಂದ ಮತ್ತೆ ನಿಮ್ಮೊಂದಿಗೆ ಬೆರೆಯುವಂತಾಗಿದೆ: ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್

