ಉಳ್ಳಾಲ: ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ.
ಹೌದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಜಗನ್ನಾಥ (44) ಅವರಿಗೆ ಇಂದು ಬೆಳಿಗ್ಗೆ ಹೃದಯಾಘಾತವಾಗಿದೆ. ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಅವರು ಇಂದು ಬೆಳಿಗ್ಗೆ ಎದೆ ನೋವಿನಿಂದ ತೀರ ಅಸ್ವಸ್ಧರಾಗಿದ್ದರು.ಕೂಡಲೇ ಅವರನ್ನ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಜಗನ್ನಾಥ್ ಅವರು ಉಳ್ಳಾಲ ,ಕೊಣಾಜೆ ಠಾಣೆಯಲ್ಲಿ ಅನೇಕ ವರುಷಗಳಿಂದ ಕರ್ತವ್ಯ ನಿರ್ವಹಿಸಿದ್ದು ಎಲ್ಲರಿಗೂ ಜಗ್ಗ ಎಂದೇ ಪರಿಚಿತರಾಗಿದ್ದರು. ಅವರು ಪುತ್ತೂರು ತಾಲೂಕಿನ ಸವಣೂರು ಗ್ರಾಮದವರಾಗಿದ್ದು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.