Friday, March 31, 2023

BREAKING NEWS: ಪ್ಯಾನ್ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕ ಜೂನ್ 30 ರವರೆಗೆ ವಿಸ್ತರಣೆ

ನವದೆಹಲಿ: ಶಾಶ್ವತ ಖಾತೆ ಸಂಖ್ಯೆ (PAN) ಕಾರ್ಡ್ ಮತ್ತು ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಲು ಗಡುವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಮಂಗಳವಾರದ ಅಧಿಸೂಚನೆಯಲ್ಲಿ ಹಣಕಾಸು ಸಚಿವಾಲಯವು...
More

    Latest Posts

    ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

    ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

    ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

    ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

    BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

    ಉಡುಪಿ: ಮತ್ತೆ ಪವಾಡ ಮೆರೆದ ಕೊರಗಜ್ಜ; ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಜೀವ ಉಳಿಸಿದ ಕೊರಗಜ್ಜ

    ಉಡುಪಿ: ತುಳುನಾಡಿನ ಬಹುತೇಕ ಜನ ನಂಬುವ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಪವಾಡ ಮತ್ತೆ ಸಾಬೀತಾಗಿದೆ. ವೈದ್ಯರೇ ಮಗು ಬದುಕುವ ಭರವಸೆಯನ್ನು ನೀಡದ ಸಂದರ್ಭದಲ್ಲಿ ಮಗುವಿನ ಹೆತ್ತವರು ಕೊರಗಜ್ಜನಲ್ಲಿ ಪ್ರಾರ್ಥಿಸಿ ಮಗುವಿನ ಹಣೆಗೆ ಕರಿಗಂಧ ಹಚ್ಚಿದ ಕೆಲವೇ ಗಂಟೆಗಳಲ್ಲಿ ಮಗುವಿನ ಆರೋಗ್ಯದಲ್ಲಿ ದಿಢೀರ್ ಚೇತರಿಕೆ ಕಂಡ ಘಟನೆ ಉಡುಪಿಯಲ್ಲಿ ನಡೆದಿದೆ.

    ಸಾಗರ ಮೂಲದ ನಾಗಶ್ರೀ ಎಂಬುವವರ ನಾಲ್ಕು ತಿಂಗಳ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಂಡು ಬಂದಿತ್ತು. ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು ಅಳು ನಿಲ್ಲಿಸುತ್ತಿರಲ್ಲಿಲ್ಲ. ಹೀಗಾಗಿ‌ ಕುಂದಾಪುರದ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ಪತ್ರೆಯಲ್ಲಿ ಮಗುವಿಗೆ ಪಿಡ್ಸ್ ಇರುವುದಾಗಿಯೂ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಅಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ಹೀಗಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಐಸಿಯು ಘಟಕದಲ್ಲಿಟ್ಟಿದ್ದರು. ಆದರು ಮಗುವಿನ ಅರೋಗ್ಯ ಚಿಂತಾಜನಕವಾಗಿತ್ತು. ಅಷ್ಟೇ ಅಲ್ಲ ಪದೇ ಪದೇ ಮಗುವಿನ ಹೃದಯ ಸ್ತಬ್ಧವಾಗುತ್ತಿರುವುದರ ಬಗ್ಗೆ ವೈದರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ವೈದರ ಪ್ರಯತ್ನ ಮಾಡುವುದಾಗಿಯೂ ಭರವಸೆ ನೀಡಿದರೂ ಮಗುವಿನ ಪ್ರಾಣ ಉಳಿಯುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು‌. ಮಗುವಿನ ಪರಿಸ್ಥಿತಿ ಕಂಡ ಕುಟುಂಬಸ್ಥರು ಕಂಗಾಲಾಗಿ ಹೋಗಿದ್ದರು‌. ಇದ್ದ ಒಂದು ಮಗುವನ್ನು ಕಳೆದುಕೊಳ್ಳುವ ಭಯದಲ್ಲಿದ್ದ ಪೋಷಕರಿಗೆ ಅಸ್ಪತ್ರೆ ಬಳಿಯಿದ್ದ ಓರ್ವ ವ್ಯಕ್ತಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ ಹಿನ್ನಲೆಯಲ್ಲಿ ಮಗುವಿನ ಹೆತ್ತವರು ಇಂದ್ರಾಳಿ, ಎಂಜಿಎಂ ಹಾಸ್ಟೆಲ್ ಬಳಿಯಿರುವ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದು ತೆರಳಿದ್ದರು. ಕೊರಗಜ್ಜನ ಕರಿಗಂಧವನ್ನು ಮಗುವಿನ ಹಣೆಗೆ ಹಚ್ಚುತ್ತಿದ್ದಂತೆಯೇ, ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಅರೋಗ್ಯ ದಿಢೀರಾಗಿ ಚೇತರಿಕೆ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ವೈದರು ಕೂಡ ತಮ್ಮ ಕೈಲಾದ ಪ್ರಯತ್ನಗಳನ್ನು ಮಾಡುವ ಮೂಲಕ ಮಗು ಅರೋಗ್ಯವಾಗಿ ಹೆತ್ತಮ್ಮಳ ಕೈಯಲ್ಲಿ ಮತ್ತೆ ಬಂದು ಸೇರಿದೆ. ಹೃದಯ ಬಡಿತವೇ ನಿಂತು ಹೋಯಿತು ಎಂದಿದ್ದ ಮಗು ಮತ್ತೆ ಕಿಲಕಿಲ‌ ನಗುತ್ತಿರುವುದನ್ನು ಕಂಡ ಕುಟುಂಬಸ್ಥರ ಸಂತೋಷ ಮುಗಿಲು ಮುಟ್ಟಿದೆ. ಯಾವುದೇ ಕಷ್ಟಕಾಲದಲ್ಲಿ ಕೈಮುಗಿದೊಡನೆ ಸಹಾಯಕ್ಕೆ ನಿಲ್ಲುವ ಆ ಶಕ್ತಿಯ ಬಗ್ಗೆ ಕುಟುಂಬಸ್ಥರು ದಂಗಾಗಿ ಹೋಗಿದ್ದಾರೆ. ಮಗು ಆರೋಗ್ಯದಲ್ಲಿ ಸುಧಾರಿಸಿದ್ದ ಕಾರಣ ಅಸ್ಪತ್ರೆಯಿಂದ ನೇರವಾಗಿ ಇಂದ್ರಾಳಿ ಬಳಿಯ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಮಗುವನ್ನು ಕೊರಗಜ್ಜ ಸ್ವಾಮಿಯ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದುಕೊಂಡರು. ಈ ಬಗ್ಗೆ ಅಚ್ಚರಿ ಹಾಗೂ ಸಂತೋಷವನ್ನು ವ್ಯಕ್ತಪಡಿಸಿರುವ ಮಗುವಿನ ಪೋಷಕರು ‘ಗಂಭೀರ ಪರಿಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಪುಟ್ಟ ಕಂದಮ್ಮನನ್ನು ಕೊರಗಜ್ಜನೇ ಸಲಹಿದ್ದು. ಬದುಕಿರುವವರೆಗೂ ಈ ಮಗು ಕೊರಗಜ್ಜನ ಪ್ರಸಾದವೆಂದೇ ನಂಬಿ ಬದುಕುತ್ತೇವೆ’ ಎಂದು ಹೇಳಿದ್ದಾರೆ.

    Latest Posts

    ಕಡಬ: ವಾಟ್ಸಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾದ ಯುವಕ

    ಕಡಬ: ವಾಟ್ಸಪ್ ನಲ್ಲಿ ಸಾಯುವ ಕುರಿತ ಸ್ಟೇಟಸ್ ಹಾಕಿ ಯುವಕನೊರ್ವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ನಡೆದಿದೆ.

    ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ನಿರ್ಜನ ಪ್ರದೇಶದಲ್ಲಿ ಪತ್ತೆ ; ಕೊಲೆ ಶಂಕೆ

    ಹುಬ್ಬಳ್ಳಿ: ಪಾಳು ಬಿದ್ದ ನಿರ್ಜನ ಜಾಗದಲ್ಲಿ ಎಂಟು ವರ್ಷದ ಬಾಲಕನೊಬ್ಬನ ಶವ ಪತ್ತೆಯಾಗಿದ್ದ ಘಟನೆ ಹುಬ್ಬಳ್ಳಿಯ ದೊಡ್ಡ ಮನಿ ಕಾಲೊನಿಯಲ್ಲಿ ನಡೆದಿದ್ದು, ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

    BIGG NEWS : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ : ನಾಲ್ವರು ‘IAS’ ಅಧಿಕಾರಿಗಳ ವರ್ಗಾವಣೆ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಅಧಿಸೂಚನೆ ಹೊರಡಿಸಿರುವಂತ ರಾಜ್ಯ...

    BIG NEWS; ‘SSLC’ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ : ಸೋಶಿಯಲ್ ಮೀಡಿಯಾದಲ್ಲಿ ವೈರಲ್

    ಕಲಬುರಗಿ : ಇಂದಿನಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆ ಆರಂಭವಾಗಿದ್ದು, ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆಯುತ್ತಿದೆ. ಇದರ ನಡುವೆ...

    Don't Miss

    ಕುಂದಾಪುರ: ಸರಣಿ ರಸ್ತೆ ಅಪಘಾತ – ಓರ್ವ ಸಾವು

    ಕುಂದಾಪುರ: ಇಲ್ಲಿನ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಸಾವಿಗೀಡಾಗಿ ಮತ್ತೋರ್ವ ಗಾಯಗೊಂಡ ಘಟನೆ ಸಂಭವಿಸಿದೆ. ಕುಂಭಾಶಿಯ ಪಾಕಶಾಲಾ ಹೊಟೇಲ್ ಸಮೀಪ ಹೋಂಡಾ ಡಿಯೋ...

    ನವದೆಹಲಿ: ಅಂಗಾಂಗ ದಾನ ಶ್ರೇಷ್ಠ ಕಾರ್ಯ- ಪ್ರಧಾನಿ ಮೋದಿ

    ನವದೆಹಲಿ: ಅಂಗಾಂಗ ದಾನದಂಥ ಮಾನವೀಯ ಕೆಲಸ ಮಾಡಬೇಕು ಎಂದು ಜನರಲ್ಲಿ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಅಲ್ಲದೇ ‘ಈ ನಿಟ್ಟಿನಲ್ಲಿ ನಮ್ಮ ಏಕರೂಪ ನೀತಿಯನ್ನು ರೂಪಿಸುತ್ತಿದ್ದು, ಅಂಗಾಂಗ ದಾನ...

    ಮಾಂತ್ರಿಕನ ಮಾತು ಕೇಳಿ 10 ವರ್ಷದ ಬಾಲಕನನ್ನು ಬಲಿ ಪಡೆದ ಮೂವರು ಅರೆಸ್ಟ್

    ಉತ್ತರ ಪ್ರದೇಶ: 10 ವರ್ಷದ ಬಾಲಕನನ್ನು ಮಾಂತ್ರಿಕನೊಬ್ಬ ನರಬಲಿ ಕೊಡುವಂತೆ ಹೇಳಿ ಕೊಂದ ಆರೋಪದ ಮೇಲೆ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪರ್ಸಾ...

    ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕ ಆತ್ಮಹತ್ಯೆ..!

    ಬಂಟ್ವಾಳ: ನೇತ್ರಾವತಿ‌ ನದಿಗೆ ಹಾರಿ ಪುತ್ತೂರಿನ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವಿಠ್ಠಲ್ ಕಾಮತ್ ಅವರ ಪುತ್ರ ವಿಘ್ನೇಶ್ ಕಾಮತ್(32) ಆತ್ಮಹತ್ಯೆ ಮಾಡಿಕೊಂಡವರು.

    BREAKING NEWS: ಕೊಚ್ಚಿಯಲ್ಲಿ ಟೇಕ್ ಆಫ್ ಆದ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ

    ಕೊಚ್ಚಿ: ಇಲ್ಲಿನ ನೆಡುಂಬಾಶ್ಶೇರಿ ವಿಮಾನ ನಿಲ್ದಾಣದಲ್ಲಿ ( Nedumbassery airport ) ಭಾನುವಾರ ಭಾರತೀಯ ಕೋಸ್ಟ್ ಗಾರ್ಡ್ (Indian Coast Guard - ICG) ಹೆಲಿಕಾಪ್ಟರ್ ಟೇಕ್ ಆಫ್ ಆಗುವ...