ಮಂಗಳೂರು, ಮೇ 25: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ (ನಿ.) ವತಿಯಿಂದ ಸ್ಥಳೀಯ ರೈತರಿಗೆ ಉತ್ತೇಜನ ನೀಡುವ ಹಾಗೂ ಗ್ರಾಹಕರಿಗೆ ತಾಜಾ ಮತ್ತು ಗುಣಮಟ್ಟದ ಹಣ್ಣುಗಳನ್ನು ಒದಗಿಸುವ ಉದ್ದೇಶದಿಂದ “ಹಲಸು–ಮಾವು ಮೇಳ”ವನ್ನು ಆಯೋಜಿಸಲಾಗಿದೆ.
ಈ ವಿಶೇಷ ಮೇಳವು ಜೂನ್ 5, 6 ಮತ್ತು 7ರಂದು ಕೆ.ವಿ.ಎಸ್.ಎಸ್. ಕಾನ್ಫರೆನ್ಸ್ ಹಾಲ್, ಕೋಟೆಕಾರು ಬೀರಿ ಜಂಕ್ಷನ್ನಲ್ಲಿ ನಡೆಯಲಿದೆ. ಪ್ರತಿದಿನ ಬೆಳಗ್ಗೆ 9 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರಿಗೆ ಮೇಳ ಮುಕ್ತವಾಗಿರುತ್ತದೆ.
ಮೇಳದಲ್ಲಿ ವಿವಿಧ ತಳಿಗಳ ರುಚಿಕರ ಮಾವು ಹಾಗೂ ಹಲಸು ಹಣ್ಣುಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗುತ್ತಿದ್ದು, ಸ್ಥಳೀಯ ರೈತರಿಗೆ ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ತಲುಪಿಸುವ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, ಹಣ್ಣು ಪ್ರಿಯರಿಗೆ ಉತ್ತಮ ಗುಣಮಟ್ಟದ ಹಣ್ಣುಗಳನ್ನು ಒಂದೇ ವೇದಿಕೆಯಲ್ಲಿ ಪಡೆಯುವ ಅವಕಾಶವೂ ದೊರೆಯಲಿದೆ.
ಈ ಕುರಿತು ಪ್ರಕಟಣೆ ನೀಡಿದ ಬ್ಯಾಂಕ್ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಅವರು, “ಸ್ಥಳೀಯ ರೈತರಿಗೆ ಪ್ರೋತ್ಸಾಹ ನೀಡುವ ಜೊತೆಗೆ ಸಾರ್ವಜನಿಕರಿಗೆ ತಾಜಾ ಹಣ್ಣುಗಳನ್ನು ಪರಿಚಯಿಸುವ ಉದ್ದೇಶದಿಂದ ಈ ಮೇಳ ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮೇಳವನ್ನು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.






