ಕನ್ನಡ ನಾಮಫಲಕ ಅಳವಡಿಕೆ ಹೋರಾಟದಲ್ಲಿ ಬಂಧನಕ್ಕೊಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ನಾರಾಯಣಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಗೊಂಡರು. ನಾರಾಯಣಗೌಡ ಬಿಡುಗಡೆಯಾಗುತ್ತಿದ್ದಂತೆ ಕುಮಾರಸ್ವಾಮಿ ಲೇಔಟ್ ನ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದಾರೆ.
ಪರಪ್ಪನ ಅಗ್ರಹಾರದ ಜೈಲಿನಿಂದ ಕರವೇ ಅಧ್ಯಕ್ಷ ನಾರಾಯಣಗೌಡ ಬಿಡುಗಡೆಯಾಗಿದ್ದಾರೆ. ನಾರಾಯಣಗೌಡ ರಿಲೀಸ್ ಆಗುತ್ತಿದ್ದಂತೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕುಮಾರಸ್ವಾಮಿ ಲೇಔಟ್ ಪೊಲೀಸರೂ ವಶಕ್ಕೆ ಪಡೆದುಕೊಂಡಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ನಾಮಫಲಕ ರ್ಯಾಲಿ ನಡೆಸಿತ್ತು. ಅಂಗಡಿ ಮುಂಗಟ್ಟುಗಳು ನಾಮಫಲಕಗಳು ಶೇ 60ರಷ್ಟು ಕನ್ನಡದಲ್ಲಿ ಇರಬೇಕೆಂದು ಆಗ್ರಹಿಸಿತ್ತು. ಅಲ್ಲದೇ ರ್ಯಾಲಿ ವೇಳೆ ಬೇರೆ ಬೇರೆ ಭಾಷೆಗಳಲ್ಲಿದ್ದ ಅಂಗಡಿಗಳ ಬೋರ್ಡ್ಗಳನ್ನು ಕಿತ್ತೆಸೆಯಲಾಗಿತ್ತು. ಈ ಸಂಬಂಧ ಪೊಲೀಸರು ನಾರಾಯಣಗೌಡ ಸೇರಿದಂತೆ ಹಲವು ಕರವೇ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.