ಕಡಬ: ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ವೃದ್ಧರೋರ್ವರನ್ನು ಚಿಲ್ಲರೆ ನೀಡಿಲ್ಲವೆಂಬ ಕಾರಣಕ್ಕೆ ಅರ್ಧ ದಾರಿಯಲ್ಲೇ ಇಳಿಸಿಹೋದ ಘಟನೆ ಇಂದು ಕಡಬದಲ್ಲಿ ನಡೆದಿದೆ.
ಬೆಳಿಗ್ಗೆ 9.30 ಗಂಟೆಗೆ ಕಲ್ಲುಗುಡ್ಡೆಯಿಂದ ಇಚಿಲಂಪಾಡಿ ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ಸಿಗೆ ಹತ್ತಿದ ಕಲ್ಲುಗುಡ್ಡೆ ನಿವಾಸಿ ವೃದ್ಧರೋರ್ವರು ಕಾಂಚನ ಎಂಬಲ್ಲಿ ಇಳಿಸುವಂತೆ 200 ರೂ. ನೀಡಿದ್ದರು. ಈ ವೇಳೆ ಕಂಡಕ್ಟರ್ ಚಿಲ್ಲರೆ ಕೇಳಿದ್ದು, ವೃದ್ಧರು ಚಿಲ್ಲರೆ ಇಲ್ಲವೆಂದಾಗ ಅರ್ಧ ದಾರಿಲ್ಲೇ ಇಳಿಸಿದ್ದಾನೆ ಎನ್ನಲಾಗಿದೆ.
ಕಾಂಚನದಲ್ಲಿ ಇಳಿಯುವ ವೇಳೆ ಚಿಲ್ಲರೆ ನೀಡಿದರೆ ಸಾಕೆಂದು ವೃದ್ಧರು ಮನವಿ ಮಾಡಿಕೊಂಡರಾದರೂ, ಕ್ಯಾರೇ ಎನ್ನದ ಕಂಡಕ್ಟರ್ ಗೋಳಿಯಡ್ಕ ಎಂಬಲ್ಲಿ ಇಳಿಸಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.
ಕಂಡಕ್ಟರ್ ನ ಈ ಅಮಾನವೀಯ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
©2021 Tulunada Surya | Developed by CuriousLabs