ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.
ಕರಾವಳಿ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಅಕ್ಕಿಯ ಬದಲು ಉತ್ತಮ ಗುಣಮಟ್ಟದ ಸ್ಥಳೀಯವಾಗಿ ಖರೀದಿ ಮಾಡಿದ ಕುಚ್ಚಲಕ್ಕಿಯನ್ನು ವಿತರಿಸಬೇಕೆಂದು ಕಟೀಲ್ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಕುಚ್ಚಲಕ್ಕಿ ವಿತರಣೆಗೆ ಆದೇಶ ಹೊರಡಿಸಿರುವುದಕ್ಕೆ ಅಭಿನಂದಿಸಿದರು.
ಈ ಸಂದರ್ಭ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ ಉಪಸ್ಥಿತರಿದ್ದರು.
