ಸುಬ್ರಹ್ಮಣ್ಯ : ರಾಮನಗರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಮೃತರನ್ನು ನಾಗೇಶ್(32) ತೇಜಶ್ವಿನಿ(14) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಏಳು ಮಂದಿ ಇದ್ದು,ಇವರೆಲ್ಲರೂ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ರಾಮನಗರದಿಂದ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಹೊರಟಿದ್ದರು. ಕುಕ್ಕೆ ಸುಬ್ರಹ್ಮಣ್ಯ–ಗುಂಡ್ಯ ರಾಜ್ಯ ಹೆದ್ದಾರಿಯ ಚೇರು ಎಂಬಲ್ಲಿ ಕಾರೊಂದು ಕಿರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದಿತ್ತು. ಕಾರು ಪಲ್ಟಿಯಾಗಿ ರಸ್ತೆಯ ಮೇಲೆ ಬಿದ್ದಿತ್ತು, ಸ್ಥಳೀಯರೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಗಾಯಗೊಂಡಿದ್ದವರು ಆಸ್ಪತ್ರೆಗೆ ದಾಖಲಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಇವರು ಸಾವನಪ್ಪಿದ್ದಾರೆ.
