Monday, June 24, 2024
spot_img
More

  Latest Posts

  ಕುಂಪಲ:ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

  ಉಳ್ಳಾಲ: ಮೊಬೈಲ್ ಶೋರೂಂವೊಂದರಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ ನಿವಾಸಿ ಯುವಕನೊಬ್ಬ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

  ಅಕ್ಷಯ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ತಾಯಿ ಬೀಡಿ ಬ್ರಾಂಚಿಗೆ ತೆರಳಿದ್ದ ವೇಳೆ ಮನೆಯ ಕಿಟಕಿಗೆ ಬೈರಾಸಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಅವರು ತೊಕ್ಕೊಟ್ಟಿನ ಅನು ಮೊಬೈಲ್ ಸೆಂಟರಲ್ಲಿ ಕೆಲಸಕ್ಕಿದ್ದು ಕಳೆದ 20 ದಿನಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದರು. ಮೊಬೈಲ್ ಶಾಪ್ ಮಾಲಕರು ಕರೆ ಮಾಡಿದರೂ ಅಕ್ಷಯ್ ಕರೆ ಸ್ವೀಕರಿಸುತ್ತಿರಲಿಲ್ಲ.

  ಖಿನ್ನತೆಯಿಂದ ಅಕ್ಷಯ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಮೃತ ಅಕ್ಷಯ್ ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

  ಊರಲ್ಲಿ ಹೆಚ್ಚಿದ ಅಕಾಲಿಕ ಸಾವುಗಳು

  ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಳ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿವೆ. ಕಳೆದ ವಾರವಷ್ಟೆ ನಂತೂರಿನಲ್ಲಿ ನಡೆದ ಅಪಘಾತದಲ್ಲಿ ಚಿಕ್ಕಪ್ಪನ ಜತೆ ಸ್ಕೂಟರರ್‌ನಲ್ಲಿ ತೆರಳುತ್ತಿದ್ದ ಕುಂಪಲ ಗುರುನಗರದ ವಿದ್ಯಾರ್ಥಿನಿ ಭೂಮಿಕ(17) ಸಾವನ್ನಪ್ಪಿದ್ದರು. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳೊಂದರಲ್ಲೇ ಕುಂಪಲ ಪ್ರದೇಶದ ರಿಕ್ಷಾ ಚಾಲಕರಾದ ಜಯಪ್ರಕಾಶ್ (42), ಜಯಂತ್ ಎಸ್. ಕುಂಪಲ (48)ಮತ್ತು ಧನಂಜಯ ರಾವ್ (53) ಎಂಬ ಮೂವರು ಅಕಾಲಿಕವಾಗಿ ಸಾವನ್ನಪ್ಪಿದ್ದರು.

  spot_img
  spot_img

  Latest Posts

  spot_imgspot_img
  spot_imgspot_img
  spot_img

  Don't Miss