ಕುಂದಾಪುರ: ಕಾಲೇಜು ಆರಂಭಕ್ಕೆ ಪೂರ್ವಭಾವಿಯಾಗಿ ಕುಂದಾಪುರದ ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ಕೋವಿಡ್ 19 ಲಸಿಕೆ ನೀಡಲಾಯಿತು.
ಇಂದು ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗಳಿಗೆ 200 ಡೋಸ್ ನಷ್ಟು ಲಸಿಕೆ ನೀಡಲಾಗಿದ್ದು, ನಾಳೆ ಮತ್ತೆ 500 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುವುದು ಎಂದು ಪ್ರಾಂಶುಪಾಲರಾದ ಪ್ರೊ.ಕೆ.ಉಮೇಶ್ ಶೆಟ್ಟಿ ತಿಳಿಸಿದ್ದಾರೆ.ಇಂದು ಜಿಲ್ಲೆಯಾದ್ಯಂತ ಪದವಿ ವಿದ್ಯಾರ್ಥಿಗಳಿಗೆ ಸುಮಾರು ಆರು ಸಾವಿರ ಡೋಸ್ ನಷ್ಟು ಲಸಿಕೆ ನೀಡಲಾಗಿದೆ.
