Sunday, September 15, 2024
spot_img
More

    Latest Posts

    ನನ್ನ ಹತ್ರನು ಪೆನ್ ಡ್ರೈವ್ ಇದೆ ಬಿಡುಗಡೆಗೆ ಸಮಯ ಸಂದರ್ಭಕ್ಕಾಗಿ ಕಾಯುತ್ತಿದ್ದೇನೆ : ಲಕ್ಷ್ಮಣ ಸವದಿ ಹೊಸ ಬಾಂಬ್

    ಬೆಳಗಾವಿ : ನನ್ನ ಹತ್ತಿರನೂ ಪೆನ್‌ಡ್ರೈವ್ ಇದ್ದು ಬಿಡುಗಡೆಗಾಗಿ ಸಮಯ ಸಂದರ್ಭಕ್ಕಾಗಿ ಕಾಯುತ್ತಿದ್ದೇನೆ ಎಂದು ಶಾಸಕ ಹಾಗೂ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಅಥಣಿ ತಾಲೂಕಿನ ಕೊಕಟನೂರು ಗ್ರಾಮದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಲಕ್ಷ್ಮಣ ಸವದಿ, ನನ್ನ ಹತ್ತಿರ ಪೆನ್‌ಡ್ರೈವ್ ಇದ್ದಾವೆ.

    ಸಂದರ್ಭ ಬಂದಾಗ ಬಿಡುಗಡೆ ಮಾಡುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪೆನ್‌ಡ್ರೈವ್ ವಿಚಾರಕ್ಕೆ ತಿರುಗೇಟು ನೀಡಿದ್ದಾರೆ.

    ನಾನು ಮಾಧ್ಯಮದಲ್ಲಿ ಹೆಚ್‌ಡಿಕೆ ಮಾತನ್ನು ನೋಡಿದ್ದೇನೆ. ತುಂಬಾ ಜನರ ಕಡೆ ಪೆನ್‌ಡ್ರೈವ್ ಇದ್ದಾವೆ. ನನ್ನ ಹತ್ತಿರ ಒಂದು ಪೆನ್‌ಡ್ರೈವ್ ಇದೆ, ಕಾಲಾನುಸಾರ ಬಿಡುಗಡೆ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ಆಗಿಲ್ಲ. ವಿರೋಧ ಪಕ್ಷ ಇದೆಯೆಂದು ತೋರಿಸಲು ಆ ರೀತಿ ಕುಮಾರಸ್ವಾಮಿ ಮಾತನಾಡಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಕೊಕಟನೂರು ಗ್ರಾಮದಲ್ಲಿ ಹೇಳಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss