Thursday, March 28, 2024
spot_img
More

    Latest Posts

    ಇಂದು ದಕ್ಷಿಣ ಕನ್ನಡ ಜಿಲ್ಲೆಯ 430 ಕಡೆಗಳಲ್ಲಿ ಬೃಹತ್ ಲಸಿಕಾ ಶಿಬಿರ!

    ಮಂಗಳೂರು: ಜಿಲ್ಲೆಯಲ್ಲಿ  ಸೆ. 8ರ ಬುಧವಾರ ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದೆ. 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರತಿ ಕೇಂದ್ರದಲ್ಲಿ ಇಬ್ಬರು ಡೇಟಾ ಟಂಟ್ರಿ ಆಪರೇಟರ್ ಸೇರಿದಂತೆ ಅಗತ್ಯವಿರುವ ಸಿಬ್ಬಂದಿಗಳನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ.

    18 ವರ್ಷ ಮೇಲ್ಪಟ್ಟವರು ಮೊದಲ ಅಥವಾ ಎರಡನೇ ಡೋಸ್ ಲಸಿಕೆಯನ್ನು ಈ ಲಸಿಕಾ ಮೇಳದಲ್ಲಿ ಪಡೆಯಬಹುದಾಗಿದೆ. ಉದ್ಯೋಗಸ್ಥರ ಅನುಕೂಲಕ್ಕಾಗಿ ಬೆಳಿಗ್ಗೆಯಿಂದ ರಾತ್ರಿಯ ವರೆಗೆ ಲಸಿಕೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಾಗರೀಕರು ಇದರ ಸದುಪಯೋಗ ಪಡೆಯುವಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಕರೆ ನೀಡಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss