Home ಸ್ಥಳೀಯ ಬಂಟ್ವಾಳ: ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ಪ್ರಕರಣ; ಎಸ್.ಐ ಸುತೇಶ್ ಎಸ್.ಪಿ. ಕಚೇರಿಗೆ ವರ್ಗಾವಣೆ..!!!

ಬಂಟ್ವಾಳ: ವಕೀಲ ಕುಲದೀಪ್ ಶೆಟ್ಟಿ ಮೇಲೆ ಹಲ್ಲೆ ಪ್ರಕರಣ; ಎಸ್.ಐ ಸುತೇಶ್ ಎಸ್.ಪಿ. ಕಚೇರಿಗೆ ವರ್ಗಾವಣೆ..!!!

0
211

ಬಂಟ್ವಾಳ: ಯುವ ವಕೀಲ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿರುವ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರವರು ಮತ್ತು ಸಿಬ್ಬಂದಿಗಳು ಜಾಗದ ವಿಚಾರವೊಂದರ ಪ್ರಕರಣದಲ್ಲಿ ವಕೀಲರಾದ ಕುಲದೀಪ್ ಶೆಟ್ಟಿ ರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿತ್ತು. ಈ ಬಗ್ಗೆ ಅವರ ಮೇಲೆ ಕ್ರಮಕೈಗೊಳ್ಳುವಂತೆ ವಕೀಲರ ಸಂಘದಿಂದ ಪ್ರತಿಭಟನೆ ಕೂಡ ನಡೆಸಲಾಗಿತ್ತು ಎಂದು ತಿಳಿದು ಬಂದಿದೆ.

ಈ ಬಗ್ಗೆ ಯಾವುದೇ ವಿಚಾರಣೆ ನಡೆಸದೆ ಇಲಾಖೆಯು ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸುತೇಶ್ ರನ್ನು ನೇರವಾಗಿ ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ..

NO COMMENTS

LEAVE A REPLY

Please enter your comment!
Please enter your name here