ಉಡುಪಿ: ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ದೆಹಲಿಯಲ್ಲಿಂದು ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ಧುರೀಣ ಎಲ್ ಕೆ. ಅಡ್ವಾಣಿಯವರನ್ನು ಅವರ ನಿವಾಸದಲ್ಲಿ ಸೌಹಾರ್ಧ ಭೇಟಿ ಮಾಡಿದರು.ಅಡ್ವಾಣಿಯವರೊಂದಿಗೆ ಉಭಯಕುಶಲೋಪರಿ ನಡೆಸಿ ಅವರಿಗೆ ದೀರ್ಘಾಯುರಾರೋಗ್ಯವನ್ನು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಅಯೋಧ್ಯಾ ರಾಮಜನ್ಮಭೂಮಿ ಆಂದೋಲನದಲ್ಲಿ ಅಡ್ವಾಣಿಯವರ ಪಾತ್ರವನ್ನು ಶ್ರೀಗಳು ಬಣ್ಣಿಸಿ ಆ ಹೋರಾಟದ ಫಲವಾಗಿ ಇಂದು ಭವ್ಯ ರಾಮಮಂದಿರನಿರ್ಮಾಣಗೊಳ್ಳುವಂತಾಗಿದೆ ಎಂದರು .ಶ್ರೀ ವಿಶ್ವೇಶತೀರ್ಥಶ್ರೀಪಾದರು ತಮಗೆ ಯಾವತ್ತೂ ನೀಡಿದ ಸ್ಫೂರ್ತಿಯನ್ನು ಮನಸಾರೆ ಸ್ಮರಿಸಿದರು. ಅಡ್ವಾಣಿಯವರಿಗೆ ಶ್ರೀ ಕೃಷ್ಣನ ಗಂಧ ಪ್ರಸಾದ ಶಾಲು ಸ್ಮರಣಿಕೆ ಫಲಮಂತ್ರಾಕ್ಷತೆಯಿತ್ತು ಆಶೀರ್ವದಿಸಿದರು .ಅಡ್ವಾಣಿ ಯವರ ಪುತ್ರಿ ಪ್ರತಿಭಾ ಅಡ್ವಾಣಿ ಮತ್ತು ಮನೆ ಮಂದಿ ಶ್ರೀಗಳನ್ನು ಬರಮಾಡಿಕೊಂಡರು .ಸ್ವಲ್ಪ ಅನಾರೋಗ್ಯವಿದ್ದರೂ ಅಡ್ವಾಣಿಯವರು ಮನೆ ಬಾಗಿಲಿನತನಕ ಬಂದು ಶ್ರೀಗಳನ್ನು ಬೀಳ್ಕೊಟ್ಟರು.