ಕುಂದಾಪುರ: ಕುಂದಾಪುರ ತಾಲೂಕಿನ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾವಳಿ ಸೇತುವೆ ತಿರುವಿನಲ್ಲಿ ಶನಿವಾರ ರಾತ್ರಿ ಗಂಟೆ 11ರ ಸುಮಾರಿಗೆ ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಸಂಪೂರ್ಣ ನುಜ್ಜುಗುಜ್ಜಾಗಿ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್ ಚಾಲಕ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ.
ಬಿದ್ಕಲ್‌ಕಟ್ಟೆಯಿಂದ ಬ್ರಹ್ಮಾವರದ ಕಡೆಗೆ ರಬ್ಬರ್ ಮರ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಅತೀ ವೇಗದಿಂದ ಬಂದು ಎದುರಿನಲ್ಲಿ ಖೋಕ್ ಸಾಗುತ್ತಿದ್ದ ಲಾರಿಗೆ ನೇರವಾಗಿ ಬಂದು ಢಿಕ್ಕಿ ಹೊಡೆದಿದ್ದಾರೆ ಎಂದು ಹೇಳಲಾಗಿದೆ. ಪರಿಣಾಮ ಲಾರಿಯಲ್ಲಿ ಪ್ರಯಾಣಿಸುತ್ತಿದ್ದ ಬಸ್ ಚಾಲಕನೊಬ್ಬ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಯ ತೀವ್ರತೆಗೆ ಲಾರಿಯ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. 12 ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್ ಗಾವಳಿ – ಬಿದ್ಕಲ್‌ಕಟ್ಟೆ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿ ಈ ಭೀಕರ ರಸ್ತೆ ಅಪಘಾತದಿಂದಾಗಿ ಈ ಮಾರ್ಗದ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ರಾತ್ರಿ 11 ಗಂಟೆಯಿಂದಲೂ ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಬಿದ್ಕಲ್‌ಕಟ್ಟೆ ಗುಡ್ಡೆಅಂಗಡಿ ಮಾರ್ಗದ ಮೂಲಕ ಸಂಚರಿಸಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದ್ದು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಕೋಟ ಪೋಲೀಸ್ ಠಾಣಿಗೆ ಸ್ಥಳೀಯರು ಮಾಹಿತಿ ನೀಡಿದರು ಕೂಡಾ ಸೂಕ್ತ ಸ್ಪಂದನೆ ದೊರಕಲಿಲ್ಲ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.