ಬೆಂಗಳೂರು : ಅದೃಷ್ಟದ ಪಚ್ಚೆ ಕಲ್ಲನ್ನು ಕಡಿಮೆ ಬೆಲೆಗೆ ಖರೀದಿಸಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಬಹುದು ಎಂದು ಆಮಿಷವೊಡ್ಡಿ ಸ್ನೇಹಿತ ಉದ್ಯಮಿಯೊಬ್ಬರಿಂದ ₹52 ಲಕ್ಷ ಪಡೆದು ಅವರ ಸ್ನೇಹಿತರೇ ವಂಚಿಸಿದ್ದಾರೆ.ನಗರದ ರಿಚ್ಮಂಡ್ ಟೌನ್ ನಿವಾಸಿ ಶೌಕತ್ ಆಲಿ ವಂಚನೆಗೆ ಒಳಗಾಗಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಆಲಿ ಸ್ನೇಹಿತರಾದ ಅಶ್ಪಾಕ್ ಬೇಗ್, ಶಾನವಾಜ್ ಮಿರ್ಜಾ ಹಾಗೂ ಸಾಜಿದ್ ವಿರುದ್ಧ ಅಶೋಕ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ ಒಂದೂವರೆ ದಶಕಗಳಿಂದ ಆಲಿ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಈ ಗೆಳೆತನದಲ್ಲಿ ಪರಸ್ಪರ ಹಣಕಾಸು ವ್ಯವಹಾರ ಸಹ ನಡೆದಿತ್ತು. ಹೀಗಿರುವಾಗ ಕಳೆದ ಏಪ್ರಿಲ್ನಲ್ಲಿ ಆಲಿಗೆ ಕರೆ ಮಾಡಿದ ಸ್ನೇಹಿತರು, ನಮಗೆ ಪರಿಚಯವಿರುವ ವ್ಯಕ್ತಿ ಬಳಿ ಬೆಲೆ ಬಾಳುವ ಪಚ್ಚೆ ಕಲ್ಲು ಇದೆ. ಅದನ್ನು ಆತ ₹52 ಲಕ್ಷಕ್ಕೆ ಮಾರುತ್ತಿದ್ದಾನೆ. ನಾವೇ ಖರೀದಿಸಿದರೆ ಅದನ್ನು ₹1 ಕೋಟಿಗೆ ಮಾರಾಟ ಮಾಡಬಹುದು ಎಂದು ಹೇಳಿದ್ದರು. ಲಾಭದಾಸೆಗೆ ಆಲಿ ಸಹ ಡೀಲ್ಗೆ ಸಮ್ಮತಿ ಸೂಚಿಸಿದ್ದರು. ಆನಂತರ ಹಂತ ಹಂತವಾಗಿ ಆಲಿಯಿಂದ ₹52 ಲಕ್ಷವನ್ನು ವಸೂಲಿ ಮಾಡಿದ ಆರೋಪಿಗಳು, ಬಳಿಕ ಪಚ್ಚೆ ಕಲ್ಲು ಕೊಡಲು ಏನೇನೂ ಸಬೂಬು ಹೇಳುತ್ತಿದ್ದರು. ಕೊನೆಗೆ ಪಚ್ಚೆ ಕಲ್ಲು ತೆಗೆದುಕೊಂಡು ಆಲಿ ಮನೆಗೆ ಹೋಗಿದ್ದ ಆರೋಪಿಗಳು, ಈ ಕಲ್ಲನ್ನು ಖರೀದಿಸಲು ವೈಟ್ಫೀಲ್ಡ್ಗೆ ಸ್ವಾಮೀಜಿಯೊಬ್ಬರು ಬಂದಿದ್ದಾರೆ ಎಂದು ಹೇಳಿ ಆಲಿಯನ್ನು ಹೊರಗೆ ಕರೆ ತಂದಿದ್ದರು. ನಂತರ ‘ಚೀನಾದ ಉದ್ಯಮಿ ಖರೀದಿಸುತ್ತಾರೆ. ಸದ್ಯ ರಾಜಸ್ಥಾನಕ್ಕೆ ವಿದೇಶಿ ಉದ್ಯಮಿ ಬಂದಿದ್ದು, ಅಲ್ಲಿ ಹೋಗಿ ಭೇಟಿ ಮಾಡಿ’ ಎಂದು ಸ್ವಾಮೀಜಿ ಹೇಳಿ ಕಳುಹಿಸಿದ್ದರು. ಇದನ್ನು ನಂಬಿದ ಉದ್ಯಮಿ, ಆರೋಪಿಗಳ ಜೊತೆಯಲ್ಲಿ ರಾಜಸ್ಥಾನಕ್ಕೆ ಪಚ್ಚೆ ಕಲ್ಲು ತೆಗೆದುಕೊಂಡು ಹೋಗಿದ್ದರು. ಅಲ್ಲಿ ಒಂದು ತಿಂಗಳು ಹೋಟೆಲ್ನಲ್ಲಿ ಉಳಿದುಕೊಂಡು ಕೊನೆಗೊಂದು ದಿನ ಪಚ್ಚೆ ಕಲ್ಲು ಮಾರಾಟ ಮಾಡಿ ಹಣವನ್ನು ತೆಗೆದುಕೊಂಡು ಬರುವುದಾಗಿ ಉದ್ಯಮಿಗೆ ಹೇಳಿ ಬೆಂಗಳೂರಿಗೆ ಕಳುಹಿಸಿದ್ದರು. ಬಳಿಕ ಆರೋಪಿಗಳು ಮೊಬೈಲ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ಅಂತಿಮವಾಗಿ ತಾನು ಮೋಸ ಹೋಗಿರುವುದು ಅರಿವಾಗಿ ಆಲಿ ವಿಶ್ವಾಸ ದ್ರೋಹ ಮಾಡಿದ ಸ್ನೇಹಿತರ ವಿರುದ್ದ ಪೊಲೀಸ್ ಮೆಟ್ಟಲೇರಿದ್ದಾರೆ.
Trending
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ
- ₹5 ಕೋಟಿ ನಕಲಿ ಔಷಧಿ ಜಾಲ ಬಯಲು: ಫಾರ್ಮ್ಹೌಸ್ನಲ್ಲಿ ನಡೆಯುತ್ತಿದ್ದ ಅಕ್ರಮ ದಂಧೆಗೆ ಅಧಿಕಾರಿಗಳ ದಾಳಿ ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಲೇಬಲ್ ಅಂಟಿಸಿ ಔಷಧಿಗಳ ಮರುಪ್ಯಾಕಿಂಗ್ – ಅವಧಿ ಮೀರಿದ ಔಷಧಿಗಳೂ ಪತ್ತೆ
- ಉಡುಪಿ: ತುಳುನಾಡಿನ ಸಂಸ್ಕೃತಿ, ಪರಂಪರೆ ಉಳಿಸುವುದು ಪ್ರತಿಯೊಬ್ಬರ ಜವಾಬ್ದಾರಿ: ಸೂರಜ್ ನಾಯಕ್ ಸೋನಿ
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ

