Sunday, September 15, 2024
spot_img
More

    Latest Posts

    ಬೆಂಕಿಯಿಂದ ಧಗಧಗಿಸಿದ ಮಧುರೈ ರೈಲು: ಸಾವಿನ ಸಂಖ್ಯೆ 10ಕ್ಕೆ ಏರಿಕೆ

    ಮಧುರೈ: ಮಧುರೈ ರೈಲ್ವೇ ಜಂಕ್ಷನ್‌ನಲ್ಲಿ ನಿಂತಿದ್ದ ಪ್ರವಾಸಿ ರೈಲಿಗೆ ಬೆಂಕಿ ತಗುಲಿ ಸಾವನ್ನಪ್ಪಿದವರ ಸಂಖ್ಯೆ ಇಲ್ಲಿಯವರೆಗೂ 10ಕ್ಕೆ ಏರಿದೆ ಎಂದು ವರದಿಯಾಗಿದೆ.

    ಈ ರೈಲು ಉತ್ತರ ಪ್ರದೇಶದ ಲಖಿಂಪುರ ಖೇರಿಯಿಂದ ಪ್ರವಾಸಿಗರನ್ನು ಹೊತ್ತೊಯ್ಯುತ್ತಿತ್ತು. ಮೊದಲು ಇಬ್ಬರು ಸಾವನ್ನಪ್ಪಿದರು.

    ಆದ್ರೆ, ಇದೀಗ ಆಸ್ಪತ್ರೆಗೆ ದಾಖಲಾದ 6 ಮಂದಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಇದೀಗ ಒಟ್ಟು ಸಾವಿನ ಸಂಖ್ಯೆ 10ಕ್ಕೇರಿದೆ. ಇನ್ನೂ ಹಲವು ಮಂದಿ ಗಂಭೀರವಾದ ಸುಟ್ಟಗಾಯಗಳಿಗೆ ಒಳಗಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಬೆಂಕಿ ಅವಘಡದಲ್ಲಿ ಎರಡು ಬೋಗಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಬೆಂಕಿ ಮತ್ತೆ ಹೊತ್ತಿಕೊಳ್ಳುವುದನ್ನು ತಡೆಯಲು ಅಗ್ನಿಶಾಮಕ ದಳದವರು ಸುಟ್ಟ ಕೋಚ್‌ಗಳನ್ನು ತಂಪಾಗಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಮೃತರ ಸಂಬಂಧಿಕರೊಂದಿಗೆ ಗುರುತನ್ನು ಸ್ಥಾಪಿಸಲು ಕೆಲಸ ಮಾಡುತ್ತಿದ್ದಾರೆ.

    ಪ್ರಾಥಮಿಕ ತನಿಖೆಯ ಪ್ರಕಾರ, ರೈಲಿನಲ್ಲಿದ್ದ ಪ್ರಯಾಣಿಕರು ಸಿಲಿಂಡರ್ ಬಳಸಿ ಅಡುಗೆ ಮಾಡುತ್ತಿದ್ದಾಗ ಗ್ಯಾಸ್‌ ಸೋರಿಕೆಯಾಗಿ ಸಿಲಿಂಡರ್ ಸ್ಪೋಟಗೊಂಡಿದೆ. ಈ ವೇಳೆ 2 ಬೋಗಿಗಳಲ್ಲಿ ಹಠಾತ್‌ ಬೆಂಕಿ ಕಾಣಿಸಿಕೊಂಡಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss