ಮಂಗಳೂರು, ಜುಲೈ 7: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 41ನೇ ಸೆಂಟ್ರಲ್ ವಾರ್ಡಿನ ಮಹಾಮ್ಮಾಯ ದೇವಸ್ಥಾನದ ಹಿಂಭಾಗದ ಚರಂಡಿಯ ಉಳಿದ ಕಾಮಗಾರಿ ಹಾಗೂ ಗೌರಿಮಠ ರಸ್ತೆಯ ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಸ್ಥಳೀಯ ನಿವಾಸಿಗಳ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ₹60 ಲಕ್ಷ ವಿಶೇಷ ಅನುದಾನದಲ್ಲಿ ಈ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು. ಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ದೊರೆಯಲಿದ್ದು, ಸಂಚಾರ ಹಾಗೂ ಮಳೆಗಾಲದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ. ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಸಮರ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ನಿಕಟಪೂರ್ವ ಸದಸ್ಯೆ ಶ್ರೀಮತಿ ಪೂರ್ಣಿಮಾ, ಮಂಡಲದ ಪ್ರರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ವಾರ್ಡಿನ ಪ್ರಮುಖರಾದ ಮುರಳೀಧರ್ ನಾಯಕ್, ಪಿ.ಸಿ. ಗುರು, ಚಂದ್ರಕಾಂತ್ ನಾಯಕ್, ಮೋಹಿತ್, ಗಿರೀಶ್ ಕುಮಾರ್, ಪ್ರಮೋದ್ ಆಚಾರ್ಯ, ಗಣಪತಿ ಕಾಮತ್, ಗಣೇಶ್, ರಾಜಕೃಷ್ಣ, ವಿದ್ಯಾ, ಸುಜಿತ್, ಸೂರಜ್, ಭರತ್ ಸೇರಿದಂತೆ ಸ್ಥಳೀಯ ನಿವಾಸಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಸ್ಥಳೀಯರ ಸಹಕಾರದೊಂದಿಗೆ ವಾರ್ಡಿನ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿಯೂ ಜನಪರ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.

