*ಮಾಲತಿ ಶೆಟ್ಟಿ ಮಾಣೂರು ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ * ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಾಹಿತಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ 2026- 27 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಂಗಳೂರಿನ ನೆಹರು ಮೈದಾನದಲ್ಲಿ ನವೆಂಬರ್ 1ರಂದು ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಂಸದರಾದ ಬ್ರಿಜೇಶ್ ಚೌಟರವರು ಹಾಗೂ ಶಾಸಕರಾದ ವೇದವ್ಯಾಸ. ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ .ಡಿ .ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎಂ.ಪಿ ಶ್ರೀನಾಥ್ ,ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾದ ವಿಶ್ವಾಸ್ ಕುಮಾರ್ ದಾಸ್ ಹಾಗೂ ವಿವಿಧ ನಿಗಮಗಳ ಅಧ್ಯಕ್ಷರು ವಿವಿಧ ಅಕಾಡೆಮಿಗಳ ಅಧ್ಯಕ್ಷರು . ಜಿಲ್ಲಾಧಿಕಾರಿಗಳಾದ ದರ್ಶನ್ ಸರ್, ಆಯುಕ್ತರಾದ ರಾಹುಲ್ ರತ್ನಪಾಂಡೆ,ಸರ್ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ,ಸರ್,ಪೊಲೀಸ್ ಆಯುಕ್ತರದ ಸುಧೀರ್ ಕುಮಾರ್ ರೆಡ್ಡಿ,ಸರ್, ಉಪಸ್ಥಿತರಿದ್ದರು . ಡಾ.ಮಾಲತಿ ಶೆಟ್ಟಿ ಮಾಣೂರುರವರು ಕಳೆದ 22 ವರುಷಗಳಿಂದ ಸಾಹಿತ್ಯ, ಪತ್ರಿಕೋದ್ಯಮ, ಸಮಾಜ ಸೇವೆ, ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸಾಹಿತ್ಯ ಪರ ಅಮೃತ ಪ್ರಕಾಶ ಪತ್ರಿಕೆಯನ್ನು ಕಳೆದ 13 ವರುಷಗಳಿಂದ ನಡೆಸುತ್ತಿದ್ದಾರೆ. 9 ಕೃತಿಗಳನ್ನು ಬರೆದಿದ್ದಾರೆ. ಪತ್ರಿಕೆಯ ವತಿಯಿಂದ ಹಿರಿಯ ಕಿರಿಯ ಲೇಖಕರ 49 ಕೃತಿಗಳನ್ನು ಸರಣಿ ಕೃತಿ ಬಿಡುಗಡೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಸರಕಾರಿ ಹಾಗೂ ಖಾಸಗಿ ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ವಿದ್ಯಾರ್ಥಿಗಳಿಗೆ ಸಾಹಿತ್ಯ ಅಭಿರುಚಿ ಮೂಡಿಸುವ ಸಲುವಾಗಿ 120 ಶಾಲಾ-ಕಾಲೇಜುಗಳಲ್ಲಿ ಯಶಸ್ವಿಯಾಗಿ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಮಾಡಿದ್ದಾರೆ .ಹಿರಿಯ ಯಕ್ಷಗಾನ ಕಲಾವಿದ ದಿವಂಗತ ಕಿಟ್ಟಣ್ಣ ಶೆಟ್ಟಿ ಮಾಣೂರು ಹಾಗೂ ರೇವತಿ ಶೆಟ್ಟಿ ಮಾಣೂರು ಅವರ ಸುಪುತ್ರಿ .ಪತಿ ಸತ್ಯ ಪ್ರಕಾಶ್ ಶೆಟ್ಟಿ ಜೊತೆ ವೈದ್ಯನಾಥ ನಗರ ಅತ್ತಾವರ ಸಾಹಿತ್ಯ ನಂದನದಲ್ಲಿ ವಾಸವಾಗಿದ್ದಾರೆ.
Trending
- ಝೀವಾ ಬುಟೀಕ್ ಮತ್ತು ಐಬಾಲ್ ಆಪ್ಟಿಕಲ್ಸ್ ಸಂಸ್ಥೆಗಳ ಗ್ರ್ಯಾಂಡ್ ಓಪನಿಂಗ್ ಸಂಭ್ರಮದಿಂದ ಸಂಪನ್ನ
- ಎಲೆಕ್ಟ್ರಿಷಿಯನ್ಗೆ ಹಲ್ಲೆ, ಬೆದರಿಕೆ: ಪಾಂಡೇಶ್ವರ ಠಾಣೆಯ ಮೂವರು ಪೊಲೀಸರ ವಿರುದ್ಧ ಸುಲಿಗೆ ಆರೋಪ! ಹೊಯ್ಸಳ ವಾಹನದಲ್ಲಿ ಕರೆದೊಯ್ದು ಹಣ ವಸೂಲಿ ಮಾಡಿದ ಆರೋಪ – ಸಂತ್ರಸ್ತನಿಂದ ದೂರು ದಾಖಲು
- ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಫ್ರ್ಯಾಂಕಿ ಡಿಸೋಜ ಕೊಳಲಗಿರಿಗೆ ಅದ್ದೂರಿ ನಾಗರಿಕ ಸನ್ಮಾನ!
- ಏಳು ತಿಂಗಳಿಂದ ವೇತನವಿಲ್ಲದೆ ಕಷ್ಟ ಪಡುತ್ತಿರುವ ಕಮ್ಯೂನಿಟಿ ಮೊಬಿಲೈಸರ್ಸ್! ಕೂಡಲೇ ಬಾಕಿ ವೇತನ ಬಿಡುಗಡೆಗೆ ಜಿಲ್ಲಾಧಿಕಾರಿ ಹಾಗೂ ಯೋಜನಾ ನಿರ್ದೇಶಕರಿಗೆ ಯೋಗಿಶ್ ಶೆಟ್ಟಿ ಜಪ್ಪು ಮನವಿ
- ಉಡುಪಿ : ಫಿಶ್ ಫ್ಯಾಕ್ಟರಿ ಮೇಲೆ ಅಕ್ಕಪಡೆ ದಾಳಿ: ಶಿಕ್ಷಣದಿಂದ ವಂಚಿತರಾಗಿದ್ದ 30 ಮಕ್ಕಳು ರಕ್ಷಣೆ! 7 ಬಾಲಕಿಯರು, 23 ಬಾಲಕರು ಬಾಲಮಂದಿರಕ್ಕೆ ದಾಖಲು
- *ಮಾಲತಿ ಶೆಟ್ಟಿ ಮಾಣೂರು ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
- ಖಾಸಗಿ ಸಾರಿಗೆ ಕಾರ್ಮಿಕರ ಹಕ್ಕುಗಳಿಗಾಗಿ ನ.19ರಂದು ದೆಹಲಿಯಲ್ಲಿ ಬಿಎಂಎಸ್ ಮಹಾಧರಣಿ
- ತುಳು ಭಾಷೆಗೆ ರಾಷ್ಟ್ರೀಯ ಸ್ಥಾನ: ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಬಹುಭಾಷಾ ಕವಿಗೋಷ್ಟಿಯಲ್ಲಿ ಅವಕಾಶ

