Thursday, April 25, 2024
spot_img
More

    Latest Posts

    ಪಕ್ಷಕ್ಕೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾದ ಮಲ್ಲಿಕಾರ್ಜುನ ಖೂಬಾ ಉಚ್ಚಾಟನೆ ಮಾಡಿದ ಬಿಜೆಪಿ

    ಇಲ್ಲಿ ತ್ರಿಕೋನ ಅಥವಾ ಚತುಷ್ಕೋನ ಸ್ಪರ್ಧೆ ಏರ್ಪಡುವ ನಿರೀಕ್ಷೆ ಇದೆ. ಜೆಡಿಎಸ್​ನ ಮುಸ್ಲಿಮ್ ಅಭ್ಯರ್ಥಿಯು ಇಲ್ಲಿ ಕಾಂಗ್ರೆಸ್​ನ ಸಾಂಪ್ರದಾಯಿಕ ಮತಬ್ಯಾಂಕ್ ಅನ್ನ ಒಡೆಯುವ ಸಾಧ್ಯತೆ ಇದೆ. ಖೂಬಾ ಅವರು ಬಿಜೆಪಿ ಅಭ್ಯರ್ಥಿಗೆ ಕಂಟಕವಾಗುವ ಸಾಧ್ಯತೆ ಇದೆ. ಹೀಗಾಗಿ, ಅಂತಿಮವಾಗಿ ಯಾರಿಗೆ ಗೆಲುವಿನ ಮಾಲೆ ಸಿಗುತ್ತದೆ ಎಂಬುದು ಕುತೂಹಲದ ಸಂಗತಿ.

    ಬೆಂಗಳೂರು: ಪಕ್ಷದ ವಿರುದ್ಧ ಬಂಡಾಯವೆದ್ದಿದ್ದ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿ ಇಂದು ಪಕ್ಷದಿಂದ ಉಚ್ಚಾಟನೆ ಮಾಡಿದೆ. ಬಸವಕಲ್ಯಾಣ ಕ್ಷೇತ್ರದಿಂದ ಬಿಜೆಪಿಯಿಂದ ಸಿಗದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖೂಬಾ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಪಕ್ಷದ ವಿರುದ್ಧ ಬಂಡಾಯ ಎದ್ದ ಕಾರಣಕ್ಕೆ ಖೂಬಾ ಅವರನ್ನು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದಾರೆ.  

    ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರು ಕೋವಿಡ್​ಗೆ ಬಲಿಯಾಗಿದ್ದರು. ಹೀಗಾಗಿ ಬಸವಕಲ್ಯಾಣ ಕ್ಷೇತ್ರ ತೆರವಾಗಿತ್ತು. ಇಂದು ಆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಪಕ್ಷ ಅವರನ್ನು ಕಡೆಗಣಿಸಿ, ಶರಣು ಸಲಗರ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಸಹಜವಾಗಿಯೇ ಅಸಮಾಧಾನಗೊಂಡ ಖೂಬಾ ಅವರು ಪಕ್ಷಕ್ಕೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss