ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಣೆ ಹಾಗೂ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡ, ಪ್ರತೀಕ್ ಯು. ಪೂಜಾರಿ (ಕಾವೂರು) ನಿರ್ಮಾಣದ ಹಾಗೂ ಭರತ್ ಶೆಟ್ಟಿ ಅವರ ಕಥೆ–ಪರಿಕಲ್ಪನೆ–ನಿರ್ದೇಶನದ ಬಹುನಿರೀಕ್ಷಿತ ತುಳು ಸಿನಿಮಾ “ಪಿಲಿಪಂಜ” ಮಂಗಳೂರಿನ ಭಾರತ್ ಮಾಲ್ನ ಬಿಗ್ ಸಿನಿಮಾಸ್ನಲ್ಲಿ ಭವ್ಯವಾಗಿ ಬಿಡುಗಡೆಯಾಯಿತು.

ಚಿತ್ರ ಬಿಡುಗಡೆ ಸಮಾರಂಭವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ತುಳು ಭಾಷೆಯ ಬೆಳವಣಿಗೆಯಲ್ಲಿ ತುಳು ನಾಟಕಗಳು ಮತ್ತು ಸಿನಿಮಾಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನಾಟಕ ಹಾಗೂ ಚಿತ್ರಗಳ ಮೂಲಕ ತುಳು ಭಾಷೆ ಇಂದು ಎಲ್ಲೆಡೆ ಪಸರಿಸಿದ್ದು, ತುಳು ಭಾಷೆಯಲ್ಲಿ ನಿರ್ಮಾಣವಾಗುವ ಪ್ರತಿಯೊಂದು ಸಿನಿಮಾಗಳನ್ನೂ ಪ್ರೇಕ್ಷಕರು ನೋಡಿ ಪ್ರೋತ್ಸಾಹಿಸಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ಆರ್. ಪದ್ಮರಾಜ್ ಪೂಜಾರಿ ಮಾತನಾಡಿ, ತುಳು ಭಾಷೆಯ ಸಿನಿಮಾಗಳು ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಶಕ್ತಿಯನ್ನು ಹೊಂದಿವೆ. ಮುಂದಿನ ದಿನಗಳಲ್ಲಿ ತುಳು ಚಿತ್ರರಂಗದಲ್ಲಿ ಇನ್ನೂ ಹೆಚ್ಚಿನ ಗುಣಮಟ್ಟದ ಸಿನಿಮಾಗಳು ಮೂಡಿ ಬರಲಿ ಎಂದು ಆಶಿಸಿದರು.
ಸಮಾರಂಭದಲ್ಲಿ ವಿಜಯಕುಮಾರ್ ಕೊಡಿಯಾಲ್ ಬೈಲ್, ಪ್ರಕಾಶ್ ಪಾಂಡೇಶ್ವರ್, ತುಳು ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್. ಧನರಾಜ್, ಕದ್ರಿ ನವನೀತ ಶೆಟ್ಟಿ, ಶಶಿಧರ ಹೆಗ್ಡೆ, ಮಾಜಿ ಕಾರ್ಪೋರೇಟರ್ ಕಿರಣ್ ಕುಮಾರ್, ಶ್ರೀಮತಿ ವೀಣಾ ಮಂಗಳ, ಪ್ರೇಮ್ ಶೆಟ್ಟಿ ಸುರತ್ಕಲ್, ಅನಿಲ್ ಕುಮಾರ್, ಕೆ.ಕೆ. ಪೇಜಾವರ, ಭಾಸ್ಕರ ರೈ ಕುಕ್ಕುವಳ್ಳಿ, ಭೋಜರಾಜ ವಾಮಂಜೂರು, ತಮ್ಮ ಲಕ್ಷ್ಮಣ್, ಲಂಚುಲಾಲ್, ಯೋಗೀಶ್ ಶೆಟ್ಟಿ ಜಪ್ಪು, ನಿರ್ಮಾಪಕ ಪ್ರತೀಕ್ ಯು. ಪೂಜಾರಿ, ನಿರ್ದೇಶಕ ಭರತ್ ಶೆಟ್ಟಿ, ರಮೇಶ್ ರೈ ಕುಕ್ಕುವಳ್ಳಿ, ಸದಾಶಿವ ಅಮೀನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಪಿಲಿಪಂಜ” ಸಿನಿಮಾ ಮಂಗಳೂರಿನಲ್ಲಿ ಪಿವಿಆರ್, ಸಿನಿಪೊಲಿಸ್, ಭಾರತ್ ಸಿನಿಮಾಸ್, ಸುರತ್ಕಲ್ನ ಸಿನಿಗ್ಯಾಲಕ್ಸಿ, ಪಡುಬಿದ್ರೆಯ ಭಾರತ್ ಸಿನಿಮಾಸ್, ಉಡುಪಿಯ ಕಲ್ಪನಾ ಹಾಗೂ ಭಾರತ್ ಸಿನಿಮಾಸ್, ಮಣಿಪಾಲದ ಭಾರತ್ ಸಿನಿಮಾಸ್, ಕಾರ್ಕಳದ ರಾಧಿಕಾ, ಬೆಳ್ತಂಗಡಿಯ ಭಾರತ್, ಪುತ್ತೂರಿನ ಭಾರತ್ ಸಿನಿಮಾಸ್ ಹಾಗೂ ಮುಡಿಪುವಿನ ಭಾರತ್ ಸಿನಿಮಾಸ್ನಲ್ಲಿ ತೆರೆಕಂಡಿದೆ.

ಈ ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ ವಾಮಂಜೂರು, ಸುಂದರ್ ರೈ ಮಂದಾರ, ಶಿವಪ್ರಕಾಶ್ ಪೂಂಜ, ರವಿ ರಾಮಕುಂಜ, ರೂಪಶ್ರೀ ವರ್ಕಾಡಿ, ರಂಜನ್ ಬೋಳೂರು, ರಾಜ್ ಪ್ರಕಾಶ್ ಶೆಟ್ಟಿ, ಪ್ರತೀಕ್ ಯು. ಪೂಜಾರಿ, ಪ್ರವೀಣ್ ಕೊಡಕ್ಕಲ್, ಜಯಶೀಲ, ಭಾಸ್ಕರ್ ಮಣಿಪಾಲ ಸೇರಿದಂತೆ ಅನೇಕ ಕಲಾವಿದರು ಅಭಿನಯಿಸಿದ್ದಾರೆ.




