ಮಂಗಳೂರು, ಜೂನ್ 18: ಜನತಾದಳ (ಜಾತ್ಯತೀತ) ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ–203ರ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸದಸ್ಯರ ಮಹತ್ವದ ಸಭೆಯು ಜೂನ್ 19, 2026ರಂದು ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ನಗರದ ವುಡ್ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ನಡೆಯಲಿದೆ.
ಕ್ಷೇತ್ರದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವುದು, ಸದಸ್ಯತ್ವ ಅಭಿಯಾನವನ್ನು ವಿಸ್ತರಿಸುವುದು, ಮುಂಬರುವ ಕಾರ್ಯಕ್ರಮಗಳ ರೂಪುರೇಷೆ ಸಿದ್ಧಪಡಿಸುವುದು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಸುವ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಜಾಕೆ ಮಾಧವ ಗೌಡ ಹಾಗೂ ಜಿಲ್ಲೆಯ ಪ್ರಮುಖ ನಾಯಕರು ಭಾಗವಹಿಸಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ. ಕ್ಷೇತ್ರದ ಸಂಘಟನಾ ಚಟುವಟಿಕೆಗಳು, ಮುಂದಿನ ಕಾರ್ಯಯೋಜನೆಗಳು ಹಾಗೂ ಪಕ್ಷದ ಬೆಳವಣಿಗೆಗೆ ಸಂಬಂಧಿಸಿದ ಹಲವು ಮಹತ್ವದ ವಿಷಯಗಳ ಕುರಿತು ಸಮಾಲೋಚನೆ ನಡೆಯಲಿದೆ.
ಆದ್ದರಿಂದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಎಲ್ಲಾ ಪದಾಧಿಕಾರಿಗಳು, ಬೂತ್ ಮಟ್ಟದ ಮುಖಂಡರು, ಕಾರ್ಯಕರ್ತರು ಹಾಗೂ ಸದಸ್ಯರು ಕಡ್ಡಾಯವಾಗಿ ಸಭೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಭೆಯ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅದ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಎನ್. ಪಿ. ಪುಷ್ಪರಾಜನ್ ಅವರು ವಿನಂತಿಸಿದ್ದಾರೆ.
ಸಭೆಯ ವಿವರಗಳು:
📍 ಸ್ಥಳ: ವುಡ್ಲ್ಯಾಂಡ್ಸ್ ಹೋಟೆಲ್ ಸಭಾಂಗಣ, ಮಂಗಳೂರು
📅 ದಿನಾಂಕ: 19 ಜೂನ್ 2026, ಶುಕ್ರವಾರ
🕥 ಸಮಯ: ಬೆಳಿಗ್ಗೆ 10.30 ಗಂಟೆ
ಸಂಘಟನೆಯ ಬಲವರ್ಧನೆಗಾಗಿ ಎಲ್ಲರೂ ಒಂದಾಗಿ ಕೈಜೋಡಿಸೋಣ. —✍️ ಯೋಗಿಶ್ ಶೆಟ್ಟಿ ಜಪ್ಪು ಮಹಾ ಪ್ರಧಾನ ಕಾರ್ಯದರ್ಶಿ ಜೆಡಿಎಸ್

