ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರ ಜನ್ಮದಿನಾಚರಣೆ ಅಂಗವಾಗಿ ತುಳುನಾಡ್ ರಕ್ಷಣಾ ವೇದಿಕೆ ಮಂಗಳೂರು ಯುವ ಘಟಕ ವತಿಯಿಂದ ರಕ್ತದಾನ ಸಪ್ತಾಹ ಆಯೋಜಸಲಾಗಿದ್ದು ಮಂಗಳೂರು ರೆಡ್ ಕ್ರಾಸ್ ನಲ್ಲಿ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗೇಶ್ ಶೆಟ್ಟಿ ಜಪ್ಪು ರವರು ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿದರು.

ಗಂಗಾಧರ್ ಶೆಟ್ಟಿ ಜಪ್ಪು ರವರು ಸ್ವಾಗತಿಸಿ ಪ್ರಶಾಂತ್ ಭಟ್ ಕಡಬ ಧನ್ಯವಾದ ಅರ್ಪಣೆಗೈದರು. ಯುವ ಘಟಕ ಅಧ್ಯಕ್ಷ ಹರೀಶ್ ಶೆಟ್ಟಿ ಶಕ್ತಿನಗರ ಮತ್ತಿತರರು ಉಪಸ್ಥಿತರಿದ್ದರು.


ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ಕಛೇರಿಯಲ್ಲಿ ಡಾ . ಬಿ. ಆರ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು. ಉಡುಪಿ ಜಿಲ್ಲಾಧ್ಯಕ್ಷ ಫ್ರಾಂಕಿ ಡಿಸೋಜಾ ಕೊಳಲಗಿರಿರವರು ಡಾ . ಬಿ. ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಗೌರವಾಧ್ಯಕ್ಷ ಕೃಷ್ಣಕುಮಾರ್ ಡಾ. ಬಿ. ಆರ್. ಅಂಬೇಡ್ಕರ್ ರವರ ಜೀವನ ಚರಿತ್ರೆ ಬಗ್ಗೆ ಮತ್ತು ಅವರ ಕೊಡುಗೆಗಳ ಬಗ್ಗೆ ಮಾತನಾಡಿದರು. ಅಜರುದ್ದೀನ್ ಸುಬ್ರಹ್ಮಣ್ಯ ನಗರ, ಮಹಿಳಾ ಘಟಕ ಜಿಲ್ಲಾಧ್ಯಕ್ಷ ಶೋಭಾ ಪಾಂಗಳ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ, ನಾಗಲಕ್ಷ್ಮಿ , ಜಿಲ್ಲಾ ಮಹಿಳಾ ಕೋಶಾಧಿಕಾರಿ ಸುನಂದ ಕೋಟ್ಯಾನ್, ಜಿಲ್ಲಾ ಕಾರ್ಯಕಾರಿ ಸದಸ್ಯ ಶಹಾಬುದ್ದೀನ್ , ಜಿಲ್ಲಾ ಕಾರ್ಮಿಕ ಘಟಕ ಜೊತೆ ಕಾರ್ಯದರ್ಶಿ ಅಬ್ದುಲ್ ಮಜೀದ್ , ಪ್ರೀತಮ್ ಡಿಸೋಜಾ , ಮತ್ತಿತ್ತರು ಉಪಸಿತರಿದ್ದರು
