ಮಂಗಳೂರು: ಭಾರೀ ಗಾಳಿ ಮಳೆಗೆ ಕಟ್ಟಡದ ಮೇಲೆ ಹಾಕಲಾಗಿದ್ದ ಬೃಹತ್ ಹೋರ್ಡಿಂಗ್ ಕೆಳಗೆ ಬಿದ್ದು, ಕಟ್ಟಡದ ಬಳಿ ನಿಲ್ಲಿಸಿದ್ದ ಹಲವಾರು ವಾಹನಗಳಿಗೆ ಹಾನಿಯಾದ ಘಟನೆ ಜು.೫ ರ ಬುಧವಾರ ಬಿಕರ್ನಕಟ್ಟೆಯಲ್ಲಿ ಘಟನೆ ನಡೆದಿದೆ.
ಘಟನೆಯಲ್ಲಿ ಕೆಲವು ಅಂಗಡಿಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹೋರ್ಡಿಂಗ್ ತೆರವುಗೊಳಿಸಿದರು. ಘಟನೆಯಿಂದ ನಂತೂರು-ಪಡೀಲ್ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಅದೃಷ್ಟವಶಾತ್, ಹೋರ್ಡಿಂಗ್ ಮುರಿದು ಬಿದ್ದಾಗ ಕೆಳಗೆ ಯಾರೂ ಇಲ್ಲದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.