Saturday, July 27, 2024
spot_img
More

    Latest Posts

    ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ- ಒಬ್ಬ ಸಾವು, ಮತ್ತೋರ್ವ ಗಂಭೀರ

    ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಂಬೂರು ಬಳಿ ಉಂಟಾದ ವಾಹನ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಚೆಂಬು ಗ್ರಾಮದ ಪ್ರತೀಕ್ (19)ಎಂಬ ಐಟಿಐ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

    ತೇಜಸ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅರಂಬೂರು ಬಳಿ ಬೈಕ್ ಮತ್ತು ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದೆ ತಿಳಿದು ಬಂದಿದೆ. ಮಾಹಿತಿ ತಿಳಿದು ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss