ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು.
Trending
- ಚಾಮರಾಜನಗರದಲ್ಲಿ ಮನಕಲಕುವ ದುರಂತ ಮಲೆ ಮಾದೇಶ್ವರ ಬೆಟ್ಟದ ಸಮೀಪ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಉಡುಪಿ ಜಿಲ್ಲೆಯಲ್ಲೂ ಚಿರತೆ ಕಾಟ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ನಿಧನ.
- SSLC ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ SDPI ಕೊಳಂಬೆ ಬ್ರಾಂಚ್ ವತಿಯಿಂದ ಸನ್ಮಾನ
- ಮನೆಗೆ ಬೀಗ ಹಾಕಿ ಹೊರಗಡೆ ಹೋಗ್ತಿದ್ದೀರಾ..? ಇನ್ನು ಚಿಂತೆ ಬೇಡ; ನಿಮ್ಮ ಮನೆಯ ಕಾವಲು ಉಡುಪಿ ಪೊಲೀಸರಿಂದ..!
- ಸುಲ್ತಾನ್ ಬತ್ತೇರಿ–ತಣ್ಣೀರುಬಾವಿಯ ಸೇತುವೆ : ಸೆಪ್ಟೆಂಬರ್ಗೆ ವಾಹನ ಸಂಚಾರ ಆರಂಭ ಸಾಧ್ಯತೆ
- ಅಮಿತ್ ಶಾ ಸಮ್ಮುಖದಲ್ಲಿ ಮಹತ್ವದ ಸಭೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೇಂದು ಅಧಿಕಾರಿ ಆಯ್ಕೆ; ಬಂಗಾಳದ ಮೊದಲ ಬಿಜೆಪಿ CM ಆಗಿ ಮೇ 9 ಪ್ರಮಾಣವಚನ
- ಫಲ್ಗುಣಿ ನದಿಯಲ್ಲಿ ಮೀನುಗಳ ಸಾಮೂಹಿಕ ಸಾವು ಮಳವೂರು–ಕೆಂಜಾರ್ ಪ್ರದೇಶದಲ್ಲಿ ಪರಿಸರ ವಿಷಕಾರಿ ತ್ಯಾಜ್ಯ ಹರಿವು ಶಂಕೆ, ಜನರ ಆಕ್ರೋಶ
- ಪತ್ರಕರ್ತ ಝಕರಿಯ ಮೇಲಿನ ಹಲ್ಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

