ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು.
Trending
- ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಹಗಲು ದರೋಡೆ, ಚಿನ್ನಾಭರಣ ದೋಚಿ ಪರಾರಿ
- ಎಟಿಎಂ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ದುರ್ಷ್ಕಮಿಗಳಿಂದ ಗುಂಡಿನ ದಾಳಿ- ಇಬ್ಬರು ಮೃತ್ಯು
- ಗೋಲ್ಡನ್ ಮೂವೀಸ್ ಸಂಸ್ಥೆ ಯ ತುಳು ಸಿನಿಮಾ ಪ್ರೊಡಕ್ಷನ್ ನಂ 1 ಗೆ ಮುಹೂರ್ತ
- ಕುಂದಾಪುರ ಪೊಲೀಸ್ ಉಪವಿಭಾಗದ ನೂತನ ಡಿವೈಎಸ್ಪಿ ಆಗಿ ಎಚ್.ಡಿ.ಕುಲಕರ್ಣಿ
- ಕಾಡು ಬಿಟ್ಟು ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಶರಣಾದ ನಕ್ಸಲರು
- ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದಲ್ಲಿ ಮಣಿಪಾಲ ಪೊಲೀಸರಿಂದ ಇಬ್ಬರ ಬಂಧನ
- ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರಿಗೆ ಗೌರವ ಸನ್ಮಾನ
- ಕುಂದಾಪುರ ತುಳುನಾಡ ರಕ್ಷಣಾ ವೇದಿಕೆ ಘಟಕದ ವತಿಯಿಂದ ಕುಂದಾಪುರ ಪುರಸಭೆಗೆ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಯುತ ಪ್ರಭಾಕರ್ ವಿ ಅವರಿಗೆ ಅಭಿನಂದನೆ ಕಾರ್ಯಕ್ರಮ