ಮುಂಬಯಿ: ಮಾತೃಭೂಮಿ ಯುವಕರ ಸಂಘ(ರಿ) ಬೆಂಗಳೂರು ಇದರ ಬೆಳ್ಳಿಹಬ್ಬ ಸಂಭ್ರಮ -2023ರ ಸಂದರ್ಭದಲ್ಲಿ ಕನ್ನಡ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಅಧ್ಯಕ್ಷ, ಕಾಂಗ್ರೆಸ್ ನಾಯಕ ,ಸಮಾಜಸೇವಕ ಸುರೇಶ್ ಶೆಟ್ಟಿ ಯೆಯ್ಯಾಡಿಯವರಿಗೆ ಹೊರನಾಡು ಕನ್ನಡಪರ ಸೇವೆಗಾಗಿ “ಮಾತೃಭೂಮಿ ರಾಷ್ಟ್ರೀಯ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಗುವುದು.
ಆ.12 ರಂದು ಬೆಂಗಳೂರಿನ ಯುವನಿಕ ಸಭಾಗೃಹದಲ್ಲಿ ನಡೆಯುವ ಈ ಸಮಾರಂಭದಲ್ಲಿ ರಾಜ್ಯ ಮಟ್ಟದ ಅಂತರ್ ಕಾಲೇಜು ಜಾನಪದ ಗೀತೆ ಸ್ಪರ್ಧೆಹಾಗೂ ಸಾಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಸ್ಥೆಯ ಕಾರ್ಯದರ್ಶಿ
ಸಂತೋಷ್ ಕುಮಾರ್ ಎಂ.ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
©2021 Tulunada Surya | Developed by CuriousLabs