ಬೆಂಗಳೂರು, ಮಾ.22: ಸಮಾಜ ಸೇವೆಯ ಕ್ಷೇತ್ರದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿರುವ ಜೆಡಿಎಸ್ ರಾಜ್ಯ ಉಪಾಧ್ಯಕ್ಷರು ಹಾಗೂ ಪಕ್ಷದ ವಕ್ತಾರರಾದ ಎಂ.ಬಿ. ಸದಾಶಿವ ರವರಿಗೆ, ವಿಶೇಷ ಮಕ್ಕಳ ಆರೈಕೆಯಲ್ಲಿ ತೋರಿದ ಮಾನವೀಯತೆ ಹಾಗೂ ಸಮರ್ಪಿತ ಸೇವೆಯನ್ನು ಪರಿಗಣಿಸಿ ಗೌರವಿಸಲಾಯಿತು.
ನಗರದ ಫೀಜಾ ಬೈ ನೆಕ್ಸಸ್ ಮಹಲ್ನಲ್ಲಿ ದಿನಾಂಕ 22-03-2026 ರಂದು ಸಂಜೆ 7.00 ಗಂಟೆಗೆ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರಾದ ಬಿ.ಎಂ. ಫಾರೂಕ್ ಮತ್ತು ಅವರ ಧರ್ಮಪತ್ನಿಯವರು ಸದಾಶಿವ ರವರನ್ನು ಸನ್ಮಾನಿಸಿ ಗೌರವಿಸಿದರು.

ವಿಶೇಷ ಮಕ್ಕಳ ಕಲ್ಯಾಣಕ್ಕಾಗಿ ಸದಾಶಿವ ರವರು ಕೈಗೊಂಡಿರುವ ಸೇವಾ ಚಟುವಟಿಕೆಗಳು ಸಮಾಜದಲ್ಲಿ ಪ್ರಶಂಸೆಗೆ ಪಾತ್ರವಾಗಿದ್ದು, ಅವರ ಸೇವಾ ಮನೋಭಾವನೆಗೆ ಈ ಗೌರವ ಕಾರ್ಯಕ್ರಮ ಸಾಕ್ಷಿಯಾಯಿತು. ವಿಶೇಷ ಮಕ್ಕಳ ಅಭಿವೃದ್ದಿ ಹಾಗೂ ಅವರ ಜೀವನಮಟ್ಟವನ್ನು ಉತ್ತಮಗೊಳಿಸಲು ಅವರು ತೋರಿದ ಬದ್ಧತೆ ಎಲ್ಲರಿಗೂ ಪ್ರೇರಣೆಯಾಗಿದೆ ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು ಅಭಿಪ್ರಾಯಪಟ್ಟರು.
ಸನ್ಮಾನ ಸ್ವೀಕರಿಸಿದ ಸದಾಶಿವ ರವರು, “ಈ ಗೌರವ ನನ್ನೊಬ್ಬನಿಗಲ್ಲ, ವಿಶೇಷ ಮಕ್ಕಳಿಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬರಿಗೂ ಸೇರಿದ್ದು. ಸಮಾಜದ ಸಹಕಾರದಿಂದ ಇನ್ನಷ್ಟು ಸೇವಾ ಕಾರ್ಯಗಳನ್ನು ಮುಂದುವರಿಸುತ್ತೇನೆ,” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು, ಸದಾಶಿವ ರವರ ಸೇವಾ ಕಾರ್ಯಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.


