ಮಂಗಳೂರು: ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ನಡೆಯುತ್ತಿರುವ ಈ ಚಟುವಟಿಕೆಗಳು, ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸಲು ಮತ್ತು ಶೈಕ್ಷಣಿಕ ಸಬಲೀಕರಣವನ್ನು ಉತ್ತೇಜಿಸಲು ಬ್ಯಾಂಕಿನ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತವೆ
