ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 39ನೇ ಫನ್ನೀರ್ ವಾರ್ಡಿನ ಸೆಮಿನರಿ ವೀವ್ 1ನೇ ಅಡ್ಡರಸ್ತೆ ಅಭಿವೃದ್ಧಿ ಕಾಮಗಾರಿಯು ರೂ. 65 ಲಕ್ಷ ವೆಚ್ಚದಲ್ಲಿ ನಡೆಯಲಿದ್ದು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಗುದ್ದಲಿ ಪೂಜೆ ನಡೆಯಿತು
ನಂತರ ಮಾತನಾಡಿದ ಶಾಸಕರು, ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ-1 ನ್ನು ಅನುಷ್ಠಾನಗೊಳಿಸಿ ನೂರಕ್ಕೂ ಹೆಚ್ಚು ಕೋಟಿ ಅನುದಾನವನ್ನು ಮೀಸಲಿಡಲಾಗಿತ್ತು. ಆದರೆ ನಂತರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮಂಗಳೂರಿನ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಅನುದಾನಕ್ಕೆ ತಡೆ ನೀಡಿತ್ತು. ಇದೀಗ ನಮ್ಮ ಸತತ ಪ್ರಯತ್ನದ ಫಲವಾಗಿ ಹಿಂದಿನ ಅನುದಾನಗಳನ್ನು ರಾಜ್ಯ ಸರ್ಕಾರವು ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ-2 ಹೆಸರಿನಲ್ಲಿ ಮತ್ತೆ ಬಿಡುಗಡೆ ಮಾಡಿದೆ ಎಂದರು.
ಈ ಸಂದರ್ಭದಲ್ಲಿ ಅಜಿತ್ ಡಿಸಿಲ್ವ, ರಮೇಶ್ ಹೆಗ್ಡೆ, ಭರತ್ ಕುಮಾರ್, ಸಂದೀಪ್ ಗರೋಡಿ, ರಾಮ್ ಪ್ರಸಾದ್, ಪ್ರವೀಣ್ ನಿಡ್ಡೇಲ್, ನವೀನ್ ಶೆಣೈ, ಗಣೇಶ್, ರೋಹಿದಾಸ್, ರತನ್, ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

