ಪುತ್ತೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ ಪುತ್ತೂರಿನಲ್ಲಿ ಆಗಸ್ಟ್ 6ರಂದು ಪುತ್ತೂರಿನಲ್ಲಿ ಒಕ್ಕಲಿಗ ಗೌಡ ಸಂಘದ ಜಿಲ್ಲಾ ಮಟ್ಟದ ಸಭೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ ಕೆಯ್ಯೂರು ಮತ್ತು ಗೌರವಾಧ್ಯಕ್ಷ ಚಿದಾನಂದ ಬೈಲಾಡಿ ಹೇಳಿದ್ದಾರೆ.
ಪ್ರಕರಣದ ನೈಜ ಅಪರಾಧಿ ಯಾರೆಂಬುದು ಪತ್ತೆಯಾಗಬೇಕು. 11 ವರ್ಷದ ಬಳಿಕ ಮತ್ತೆ ನ್ಯಾಯಕ್ಕಾಗಿ ಹೋರಾಟ ಮಾಡಬೇಕಾದ ಅನಿವಾರ್ಯತೆ ಬಂದಿದೆ. ನಾಳೆ ಪುತ್ತೂರಿನಲ್ಲಿ ಒಕ್ಕಲಿಗ ಗೌಡ ಸೇವಾ ಸಂಘದ ಜಿಲ್ಲಾ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ನೈಜ ಅಪರಾಧಿಗಳನ್ನ ಬಂಧಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು. ಸೌಜನ್ಯ ತಾಯಿ ಕುಸುಮಾವತಿ ಮೇಲೆ ಹಲ್ಲೆಗೆ ಯತ್ನ ಪ್ರಕರಣವನ್ನು ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಖಂಡಿಸುತ್ತದೆ. ಇಂತಹ ಹಲ್ಲೆ ಯತ್ನ ನಡೆಯಬಾರದಿತ್ತು. ನಾವು ಯಾರ ಮೇಲೂ ಆರೋಪ ಮಾಡುವುದಿಲ್ಲ. ಆದರೆ ಘಟನೆ ನಡೆದಿರುವುದು ಖೇದಕರ ಎಂದರು.