ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿದ ಹವಾಮಾನ ಇಲಾಖೆ ಕರಾವಳಿ, ಉತ್ತರ ಒಳನಾಡಿಗೆ ಸದ್ಯಕ್ಕೆ ಮಳೆಯಾಗುವುದಿಲ್ಲ.ಕೊನೆಯ ಮೂರು ದಿನ ಮಾತ್ರ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಲ್ಲದೆ, ಉತ್ತರ ಒಳನಾಡು ಜಿಲ್ಲೆಗಳಿಗೆ ಮಾತ್ರ ಕೊನೆಯ ಮೂರು ದಿನ ಯಲ್ಲೋ ಅಲರ್ಟ್, ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ 5 ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.