ಬಂಟ್ವಾಳ: ಅಕ್ರಮ ಮರಳುಗಾರಿಕಾ ಅಡ್ಡೆಗೆ ಗಣಿ ಇಲಾಖಾ ತಂಡ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ದಾಳಿ ನಡೆಸಿ ಸ್ಥಳದಲ್ಲಿ ಮರಳುಗಾರಿಕೆಗೆ ಬಳಸುವ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಲಾಗಿದೆ. ಸರಪಾಡಿ ಸಮೀಪದ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಎಂಬಲ್ಲಿ ಅಕ್ರಮವಾಗಿ ಬೋಟ್ ಬಳಕೆ ಮಾಡಿ ಮರಳುಗಾರಿಕೆ ಮಾಡುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಗಣಿ ಇಲಾಖಾ ಅಧಿಕಾರಿಗಳ ತಂಡ ದಾಳಿ ನಡೆಸಿದಾಗ ಸ್ಥಳದಲ್ಲಿ ಮರಳು ಗಾರಿಕೆಗೆ ಬಳಸುವ ಸೊತ್ತುಗಳು ಕಂಡು ಬಂದಿದ್ದು, ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂರು ಬೋಟ್ ಹಾಗೂ ಮರಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಕಂದಾಯ ನಿರೀಕ್ಷಕ ಚೆನ್ನಬಸಪ್ಪ, ಗಣಿ ಇಲಾಖೆಯ ಅಧಿಕಾರಿ ಮಹಾದೇಶ್ವರ, ಪಿ. ಡಿ. ಒ. ವಿಜಯಲಕ್ಷ್ಮಿ ದೊಡ್ಡಪತ್ತಾರ್, ಗ್ರಾಮಾಂತರ ಎನ್ ಐ ಹರೀಶ್ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
©2021 Tulunada Surya | Developed by CuriousLabs