ಬೆಂಗಳೂರು:ರಾಜ್ಯದಲ್ಲಿ ವಿಮಾನ ನಿಲ್ದಾಣ, ಏರ್‌ಸ್ಟ್ರಿಪ್‌ಗಳ ನಿರ್ಮಾಣ ಯೋಜನೆಗಳಿಗೆ ವೇಗ ನೀಡಲಾಗಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಿನಿ ಏರ್‌ಪೋರ್ಟ್ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದೆ ಎಂದು ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ವಿ.ಸೋಮಣ್ಣ ಹೇಳಿದರು.
ವಿಧಾನಸೌಧ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘‘ಧರ್ಮಸ್ಥಳದಿಂದ 11 ಕಿ.ಮೀ. ದೂರದಲ್ಲಿ160 ಎಕರೆ ಜಾಗ ಗುರುತಿಸಲಾಗಿದ್ದು, ಭೂಮಿ ಹಸ್ತಾಂತರವಾಗುತ್ತಿದ್ದಂತೆ ಕಾಮಗಾರಿ ಆರಂಭಿಸಲಾಗುವುದು. ಕೇಂದ್ರ ಸರಕಾರವೂ ಈ ಯೋಜನೆ ವಿಚಾರದಲ್ಲಿ ಹೆಚ್ಚು ಆಸಕ್ತಿ ವಹಿಸಿದೆ,’’ ಎಂದರು.
ರಾಜ್ಯಾದ್ಯಂತ ನಾನಾ ವಿಮಾನ ನಿಲ್ದಾಣ, ಏರ್‌ಸ್ಟ್ರಿಪ್‌ಗಳ ನಿರ್ಮಾಣ ಯೋಜನೆ ಚುರುಕುಗೊಳಿಸಲಾಗಿದೆ. ಶಿವಮೊಗ್ಗ ವಿಮಾನನಿಲ್ದಾಣ ಸಿದ್ಧವಾಗಿದ್ದು, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಎರಡು, ಮೂರು ಬಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಹುತೇಕ ಫೆಬ್ರವರಿಯಲ್ಲಿಉದ್ಘಾಟನೆಗೆ ಮಹೂರ್ತ ನಿಗದಿಯಾಗಲಿದೆ,’’ ಎಂದು ಹೇಳಿದರು.