ವಿಜಯನಗರ: ರಾಜ್ಯದಲ್ಲಿನ ಮಹಿಳಾ ಸ್ವಸಹಾಯ ಸಂಘಗಳಿಗೆ ಒಂದು ಲಕ್ಷದವರೆಗೆ ಬಡ್ಡಿರಹಿತ ಸಾಲವನ್ನು ನೀಡಲಾಗುತ್ತದೆ ಎಂಬುದಾಗಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ಇಂದು ನಗರದಲ್ಲಿ ಆಯೋಜಿಸಿದ್ದಂತ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, 32 ಫಲಾನುಭವಿಗಳಿಗೆ ಸಾಗುವಳಿ ಪಟ್ಟ, 44 ಮಹಿಳಾ ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷ ಬಡ್ಡಿರಹಿತ ಸಾಲ ಸೌಲಭ್ಯದ ಚೆಕ್ ವಿತರಿಸಿದರು.
ಈ ಬಳಿಕ ಮಾತನಾಡಿದಂತ ಅವರು, ನಾನು ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷನಾಗಿದ್ದು, ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲ ಕೊಡುವ ಯೋಜನೆ ಇದೆ. ಅನೇಕ ಸ್ವಸಹಾಯ ಸಂಘಗಳು ಸಕಾಲಕ್ಕೆ ಹಣವನ್ನು ಮರುಪಾವತಿಸುತ್ತಿವೆ ಎಂದರು.
ಸದ್ಯ ಮಹಿಳಾ ಸ್ವಸಹಾಯ ಸಂಘಗಳಿಗೆ 1 ಲಕ್ಷದವರೆಗೆ ಬಡ್ಡಿ ರಹಿತ ಸಾಲ ಕೊಡಲಾಗುತ್ತಿದೆ. ಈ ಮೊತ್ತವನ್ನು ಹೆಚ್ಚಿಸುವಂತೆ ನಾನು ಸೇರಿದಂತೆ ಜನಪ್ರತಿನಿಧಿಗಳು ಕೋರಿದ್ದೇವೆ ಎಂದರು.
