ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದದೊಂದಿಗೆ ಕಾಂಗ್ರೆಸ್ ಸರ್ಕಾರ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದು ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಬಳಿಕ, ಎಲ್ಲಾ ನಿಗಮಗಳ ನಾಮನಿರ್ದೇಶನವನ್ನು ರದ್ದುಗೊಳಿಸಿದ್ದರು.
ಈ ಬಳಿಕ ಇಂದು ಕೆ ಎಸ್ ಆರ್ ಟಿ ಸಿ ಸೇರಿದಂತೆ ಮೂರು ನಿಗಮಗಳ ಅಧ್ಯಕ್ಷರನ್ನಾಗಿ ಸಚಿವ ರಾಮಲಿಂಗಾರೆಡ್ಡಿಯವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಲಾಗಿದೆ.
ಈ ಕುರಿತಂತೆ ಇಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಆದೇಶದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದಂತ ರಾಲಿಂಗಾರೆಡ್ಡಿಯವರನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಯಕ ರಸ್ತೆ ಸಾರಿಗೆ ನಿಗಮಗಳ ಅಧ್ಯಕ್ಷರನ್ನಾಗಿ ತಕ್ಷಣದಿದಂ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದ್ದಾರೆ.