Saturday, November 9, 2024
spot_img
More

    Latest Posts

    ಸನಾತನ ಸಂಸ್ಕೃತಿಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕು- ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಗೆ ಕೇಮಾರು ಶ್ರೀ ಖಂಡನೆ

    ಉಡುಪಿ: ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್ ಹೇಳಿಕೆಯನ್ನು ಸಾಂದೀಪನಿ ಸಾಧನಾಶ್ರಮ ಶ್ರೀ ಕ್ಷೇತ್ರ ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ ಯವರು ತೀವ್ರವಾಗಿ ಖಂಡಿಸಿದ್ದಾರೆ.

    ಸನಾತನ ಸಂಸ್ಕೃತಿಯ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಬೇಕು. ಸನಾತನ ಸಂಸ್ಕೃತಿ ಹಾಗೂ ಧರ್ಮದ ರಕ್ಷಣೆಗಾಗಿ ಲಕ್ಷೋಪಲಕ್ಷ ಸಾಧು ಸಂತರು ತಪಸ್ಸಿನ ಮೂಲಕ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದಾರೆ. ಸನಾತನ ಪರಂಪರೆ, ಸಂಸ್ಕೃತಿಯನ್ನು ವಿಶ್ವದ ಎಲ್ಲೆಡೆ ಪಸರಿಸುವ ಕೆಲಸವನ್ನು ಮಾಡಿದ್ದಾರೆ. ಈ ಮಣ್ಣಿನ ಮೂಲ ಧರ್ಮ, ಸಂಸ್ಕೃತಿ, ಜೀವನ ವಿಧಾನವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಬಾಲ್ಯದಿಂದಲೇ ಮಕ್ಕಳಿಗೆ ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದನ್ನು ಕಲಿಸಬೇಕು ಎಂದು ಹೇಳಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss