Saturday, April 20, 2024
spot_img
More

    Latest Posts

    ವಿವಾಹಿತ, ಅವಿವಾಹಿತ ಸೇರಿ ಎಲ್ಲಾ ಮಹಿಳೆಯರು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು: ಸುಪ್ರೀಂ

    ನವದೆಹಲಿ: ವಿವಾಹಿತ ಅಥವಾ ಅವಿವಾಹಿತ ಸೇರಿದಂತೆ ಎಲ್ಲಾ ಮಹಿಳೆಯರು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂಕೋರ್ಟ್ ಗುರುವಾರ (ಸೆಪ್ಟೆಂಬರ್ 29) ತೀರ್ಪು ನೀಡಿದೆ.

    ವಿವಾಹಿತೆ ಎಂಬ ಕಾರಣದ ಹಿನ್ನೆಲೆಯಲ್ಲಿ ಬಲವಂತವಾಗಿ ಗರ್ಭಪಾತ ಮಾಡಿಸುವಂತಿಲ್ಲ. ಮೆಡಿಕಲ್ ಟರ್ಮಿನೇಶನ್ ಆಫ್ ಪ್ರೆಗ್ನೆನ್ಸಿ ಕಾಯ್ದೆ ಪ್ರಕಾರ ವಿವಾಹಿತ ಅಥವಾ ಅವಿವಾಹಿತ ಮಹಿಳೆ ಗರ್ಭಪಾತ ಮಾಡಿಸಿಕೊಳ್ಳುವ ಹಕ್ಕನ್ನು ಹೊಂದಿದ್ದಾರೆ. ನಿಯಮದ ಪ್ರಕಾರ 24 ವಾರಗಳ ಗರ್ಭಧಾರಣೆಯನ್ನು ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ತಿಳಿಸಿದೆ.

    ವಿವಾಹಿತ ಮಹಿಳೆಗೆ ಬಲವಂತವಾಗಿ ಗರ್ಭಪಾತ ಮಾಡಿಸಿದಲ್ಲಿ ಇದನ್ನು ಅತ್ಯಾಚಾರ ಎಂದು ಪರಿಗಣಿಸಬಹುದಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. 20ರಿಂದ 24 ವಾರಗಳ ಕಾಲಾವಧಿಯ ಗರ್ಭಾವಸ್ಥೆ ಹೊಂದಿರುವ ವಿವಾಹಿತ ಅಥವಾ ಅವಿವಾಹಿತ ಮಹಿಳೆಯ ಗರ್ಭಪಾತಕ್ಕೆ ಅವಕಾಶ ನೀಡದಿರುವುದು ಕಲಂ 14ರ ಅನ್ವಯ ಕಾನೂನು ಬಾಹಿರವಾಗಲಿದೆ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.

    ಆಧುನಿಕ ಕಾಲಘಟ್ಟದಲ್ಲಿ ಮೆಡಿಕಲ್ ಟರ್ಮಿನೇಶನ್ ಆಫ್ ಪ್ರೆಗ್ನೆನ್ಸಿ ಕಾಯ್ದೆಯನ್ನು ನಾವು ಇಂದು ವಾಸ್ತವ ನೆಲೆಯಲ್ಲಿ ಅರ್ಥೈಸಿಕೊಳ್ಳಬೇಕಾಗಿದೆ. ಅಷ್ಟೇ ಅಲ್ಲ ಇಂದು ನಾವು ಹಳೆಯ ನಿಯಮಗಳೊಂದಿಗೆ ಅದನ್ನು ನಿರ್ಬಂಧಿಸುವುದು ಸೂಕ್ತವಲ್ಲ. ಕಾನೂನು ಯಾವತ್ತೂ ಸ್ಥಿರವಾಗಿರಬಾರದು ಮತ್ತು ಸಾಮಾಜಿಕ ವಾಸ್ತವಗಳನ್ನು ಗಮನದಲ್ಲಿಟ್ಟುಕೊಂಡು ಅರ್ಥೈಸಬೇಕಾಗಿದೆ ಎಂದು ಸುಪ್ರೀಂ ತಿಳಿಸಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss