Tuesday, October 8, 2024
spot_img
More

    Latest Posts

    ಜೂನ್ 30ರಂದು ಪರಿಷತ್ತಿಗೆ ಚುನಾವಣೆ: ಮಾಜಿ ಬಿಜೆಪಿ ಮುಖಂಡ ಜಗದೀಶ್‌ ಶೆಟ್ಟರ್‌, ಕುಮಕನ್ನೂರು, ಬೋಸರಾಜುಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

    ಬೆಂಗಳೂರು: ಜೂನ್.30ರಂದು ನಡೆಯಲಿರುವಂತ ಮೂರು ವಿಧಾನಪರಿಷತ್ತಿನ ಸ್ಥಾನಗಳ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

    ಈ ಕುರಿತಂತೆ ಎಐಸಿಸಿಯಿಂದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

    ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವಂತ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನಾಗಿ ಮಾಜಿ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕುಮಕನ್ನೂರು ಹಾಗೂ ಎನ್ ಎಸ್ ಬೋಸರಾಜು ಅವರ ಹೆಸರನ್ನು ಘೋಷಿಸಿದೆ.

    ನಾಳೆ ವಿಧಾನ ಪರಿಷತ್ ಉಪ ಚುನಾವಣೆಗೆ ಕೊನೆಯ ದಿನವಾದ ಕಾರಣ ಕಾಂಗ್ರೆಸ್ ಪಕ್ಷದಿಂದ ಈ ಮೂವರು ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದಾರೆ.

    ಅಂದಹಾಗೇ ಕೇಂದ್ರ ಚುನಾವಣಾ ಆಯೋಗದಿಂದ ವಿಧಾನಸಭಾ ಮೂರು ಸ್ಥಾನಗಳಿಗೆ ಉಪಚುನಾವಣೆ ಸಂಬಂಧ ಅಧಿಸೂಚನೆಯನ್ನು ಹೊರಡಿಸಿತ್ತು. ಶಾಸಕ ಲಕ್ಷ್ಮಣ್ ಸವದಿ ಅವರ ವಿಧಾನ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್.14ಕ್ಕೆ, ಬಾಬು ರಾವ್ ಚಿಂಚನಸೂರ್ ಜೂನ್.17ರಂದು ಹಾಗೂ ಆರ್ ಶಂಕರ್ ಅವರ ಅಧಿಕಾರಾವಧಿ ಜೂನ್.30ರಂದು ಕೊನೆಗೊಳ್ಳಲಿದೆ ಎಂದಿತ್ತು.

    ಮೂವರು ಕರ್ನಾಟಕ ವಿಧಾನ ಪರಿಷತ್ ಸದಸ್ಯರ ಅಧಿಕಾರಾವಧಿ ಕೊನೆಗೊಳ್ಳುತ್ತಿರುವ ಹಿನ್ನಲೆಯಲ್ಲಿ ಈ ಮೂರು ಸ್ಥಾನಗಳಿಗೆ ಜೂನ್.30ರಂದು ಉಪ ಚುನಾವಣೆ ನಡೆಸುವುದಾಗಿ ತಿಳಿಸಿತ್ತು.

    ಇನ್ನೂ ಜೂನ್.13ರಂದು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಜೂನ್.20ರ ನಾಳೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ. ಜೂನ್.21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಜೂನ್.23ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂನ್. 30ರಂದು ಮತದಾನವನ್ನು ನಿಗದಿ ಪಡಿಸಲಾಗಿದೆ. ಜೂನ್.30ರಂದು ಬೆಳಿಗ್ಗೆ 9 ರಿಂದ 4 ಗಂಟೆಯವರೆಗೆ ನಡೆಸಲಾಗುತ್ತದೆ. ಸಂಜೆ 5 ಗಂಟೆಗೆ ಮತಗಳ ಏಣಿಕೆ ಕಾರ್ಯ ನಡೆದು, ಫಲಿತಾಂಶ ಅಂದೇ ಘೋಷಣೆಯಾಗಲಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss