ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದ ಸಮುದ್ರದಲ್ಲಿ ಕೆಲ ದಿನಗಳಿಂದ ಬಲವಾದ ಗಾಳಿ ಬೀಸುತ್ತಿರುವ ಹಿನ್ನೆಲೆ ಮೀನುಗಾರರು ಆತಂಕಕ್ಕೊಳಗಾಗಿದ್ದಾರೆ.
ಸಮುದ್ರದಲ್ಲಿ ಗಾಳಿಯ ಅಬ್ಬರವು ಗಂಟೆಗೆ 28 ಕಿ.ಮೀನಿಂದ 32 ಕಿ.ಮೀ.ವರೆಗೆ ವೇಗದ ಗಾಳಿ ಬೀಸುತ್ತಿದೆ. ಹೀಗಾಗಿ ಮೀನುಗಾರರು ಕಂಗಾಲಾಗಿದ್ದಾರೆ. ಆಳಸಮುದ್ರದ ಮೀನುಗಾರಿಕೆ ಸಂಪೂರ್ಣ ಬಂದ್ ಆಗುವ ಪರಿಸ್ಥಿತಿಯಲ್ಲಿದೆ. ಅಷ್ಟೇ ಅಲ್ಲ, ಇತರ ಮೀನುಗಾರರೂ ತಮ್ಮ ಬೋಟುಗಳನ್ನು ಕಡಲಿಗಿಳಿಸಿಲ್ಲ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಮೇ 11ರವರೆಗೆ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಚಂಡಮಾರುತಕ್ಕೆ ಈಗಾಗಲೇ ಮೋಚಾ ಎಂದು ಹೆಸರಿಡಲಾಗಿದೆ. ಈಗಾಗಲೇ ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸಮುದ್ರಗಳಲ್ಲಿ ಬಲವಾದ ಗಾಳಿ ಬೀಸುತ್ತಿದೆ. ಇದರಿಂದ ಆಳಸಮುದ್ರ ಮತ್ತು ಎಲ್ಲ ರೀತಿಯ ಮೀನುಗಾರಿಕೆಗೆ ಅಡ್ಡಿ ಉಂಟಾಗಿದೆ. ಮೀನುಗಾರರು ಸಮುದ್ರಕ್ಕಿಳಿದು ಬಲೆ ಹಾಕಲು ಹಿಂದೇಟು ಹಾಕುತ್ತಿದ್ದಾರೆ. ಮೀನುಗಾರರು ಕಡಲಿಗಿಳಿಯದ ಕಾರಣ ಮೀನಿನ ಬೆಲೆಯೂ ನಿಧಾನವಾಗಿ ಏರುತ್ತಿದೆ. ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ