ಮಂಗಳೂರು ನವ ಮಂಗಳೂರು ಬಂದರು ಪ್ರಾಧಿಕಾರದಲ್ಲಿ ಅಂದಾಜು 3,600 ರಿಂದ 4,500 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ನಗರದ ಗೋಲ್ಡ್ ಪಿಂಚ್ ಮೈದಾನದಲ್ಲಿ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲು ದೇಶದ ಪ್ರಧಾನಮಂತ್ರಿಗಳು ಸೆಪ್ಟಂಬರ್ 2ರಂದು ಮಂಗಳೂರಿಗೆ ಆಗಮಿಸುತ್ತಿರುವುದು ಸಂತಸದ ವಿಷಯ.
ಈ ಹಿನ್ನೆಲೆಯಲ್ಲಿ ತುಳುನಾಡ ರಕ್ಷಣಾ ವೇದಿಕೆ ವತಿಯಿಂದ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವು ಪ್ರಮುಖ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಗುವುದು.
ಪ್ರಮುಖ ಬೇಡಿಕೆಗಳು:-
- ತುಳು ಭಾಷೆಯನ್ನು ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಬೇಕು
- ತುಳು ಭಾಷೆಯನ್ನು ಕರ್ನಾಟಕದ 2ನೇ ಆಡಳಿತ ಭಾಷೆಯನ್ನಾಗಿ ಜಾರಿಗೊಳಿಸಬೇಕು
- ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಇಲಾಖೆಯ ಹಾಗೂ ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು
